ಈಗಿನ ಸುದ್ದಿ

ದೇವಯಾನಿ ವಿರುದ್ಧದ ವೀಸಾ ವಂಚನೆ ಪ್ರಕರಣ ಕೈ ಬಿಟ್ಟ ಅಮೆರಿಕ

ದೇವಯಾನಿ ವಿರುದ್ಧದ ವೀಸಾ ವಂಚನೆ ಪ್ರಕರಣ ಕೈ ಬಿಟ್ಟ ಅಮೆರಿಕ
Published On :

ನ್ಯೂಯಾರ್ಕ್: ಭಾರತೀಯ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಾಗಡೆ ಅವರ ದೇವಯಾನಿ ವಿರುದ್ಧದ ವೀಸಾ ವಂಚನೆ ಪ್ರಕರಣವನ್ನು ಗುರುವಾರ ಅಮೆರಿಕ ಕೋರ್ಟ್ ವಜಾಗೊಳಿಸಿದೆ. ಇದರಿಂದ ದೇವಯಾನಿ ಪ್ರಕರಣದಲ್ಲಿ ಅಮೆರಿಕಕ್ಕೆ ಭಾರಿ ಹಿನ್ನಡೆಯಾದಂತಾಗಿದೆ.

ದೇವಯಾನಿ ಖೋಬ್ರಾಗಡೆ ಅವರ ಬಂಧನ ಮತ್ತು ಕ್ಯಾವಿಟಿ ಸರ್ಚ್ ಪ್ರಕರಣದಿಂದ ಅಮೆರಿಕ ಮತ್ತು ಭಾರತದ ನಡುವಿನ ಹಲವು ವರ್ಷಗಳ ಉತ್ತಮ ಬಾಂಧವ್ಯಕ್ಕೆ ಧಕ್ಕೆಯಾಗಿತ್ತು.

ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಉಪ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದೇವಯಾನಿ ಅವರನ್ನು ವೀಸಾ ವಂಚನೆ ಆರೋಪದ ಮೇಲೆ ಕಳೆದ ಡಿಸೆಂಬರ್ 12ರಂದು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಅಮೆರಿಕ ನ್ಯಾಯಾಧೀಶ ಶಿರ ಶೆಡ್ಲಿನ್ ಅವರು ದೇವಯಾನಿ ಅವರಿಗೆ ಸಂಪೂರ್ಣ ರಾಜತಾಂತ್ರಿಕ ರಕ್ಷಣೆ ನೀಡಿದ ಆಧಾರದ ಮೇಲೆ ಅವರ ವಿರುದ್ಧದ ಪ್ರಕರವನ್ನು ವಜಾಗೊಳಿಸಿದ್ದಾರೆ. ಅಮೆರಿಕ ಕೋರ್ಟ್‌ನ ಈ ನಿರ್ಧಾರವನ್ನು ಭಾರತ ಸ್ವಾಗತಿಸಿದೆ.

ಜನವರಿ 8ರಂದು ಭಾರತ ಸರ್ಕಾರ ದೇವಯಾನಿ ಅವರಿಗೆ ಸಂಪೂರ್ಣ ರಾಜತಾಂತ್ರಿಕ ರಕ್ಷಣೆ ನೀಡಿ ವಿಶ್ವಸಂಸ್ಥೆಗೆ ವರ್ಗಾವಣೆ ಮಾಡಿತ್ತು. ಅಲ್ಲದೆ ತಮ್ಮ ವಿರುದ್ಧದ ಪ್ರಕರಣವನ್ನು ಕೈಬಿಡುವಂತೆ ದೇವಯಾನಿ ಅವರು ಸಹ ಅಮೆರಿಕ ಕೋರ್ಟ್‌ಗೆ ಮನವಿ ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.