ರೈಲ್ವೆ ನಿಲ್ದಾಣದಲ್ಲಿ ದಾಂಧಲೆ: ಕೇಜ್ರಿ ವಿರುದ್ಧ ಪ್ರಕರಣ ದಾಖಲು

ಮುಂಬೈ: ಚರ್ಚ್ಗೇಟ್ ರೈಲ್ವೇ ನಿಲ್ದಾಣದ ಬಳಿ ನಿನ್ನೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ದಾಂಧಲೆ ನಡೆದ ಹಿನ್ನಲೆಯಲ್ಲಿ ಗುರುವಾರ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ಕಾರ್ಯಕರ್ತರ ವಿರುದ್ಧ ಗುರುವಾರ ಪ್ರಕರಣ ದಾಖಲಾಗಿದೆ.
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಕೇಜ್ರಿವಾಲ್ ಅವರು ಮುಂಬೈಗೆ ತೆರಳಿದ್ದರು. ಮುಂಬೈನ ಚರ್ಚ್ಗೇಟ್ ರೈಲ್ವೇ ನಿಲ್ದಾಣದಲ್ಲಿ ಕೇಜ್ರಿವಾಲ್ ಬೆಂಬಲಿಗರು ದಾಂದಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೆಟಲ್ ಡಿಟೇಕ್ಟರ್ ಸೇರಿದಂತೆ ಇತರೆ ಉಪಕರಣಗಳನ್ನು ಧ್ವಂಸಗೊಂಡಿದ್ದವು. ಈ ಹಿನ್ನಲೆಯಲ್ಲಿ ಕೇಜ್ರಿವಾಲ್ ವಿರುದ್ಧ ಇಂದು ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸೆಕ್ಷನ್ 188, 141 ಮತ್ತು 143ರ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಕೇಜ್ರಿವಾಲ್ ಟ್ರಾಫಿಕ್ ನಿಯಮವನ್ನು ಮುರಿದು, ಆಟೋದಲ್ಲಿ ಪ್ರಚಾರ ರ್ಯಾಲಿ ಕೈಗೊಂಡಿದ್ದಾರೆ ಹಾಗೂ ರೋಡ್ ಶೋ ನಡೆಸಲು ಪಕ್ಷ ಅಧಿಕಾರಿಗಳಿಂದ ಅನುಮತಿ ಪಡೆದುಕೊಂಡಿಲ್ಲ ಎಂದು ಕೇಜ್ರಿವಾಲ್ ವಿರುದ್ಧ ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


