ಈಗಿನ ಸುದ್ದಿ

ಸುಬ್ರತಾ ರಾಯ್ ಜಾಮೀನು ಅರ್ಜಿ ವಜಾ, ಮಾ.25ರವರೆಗೆ ಜೈಲೇ ಗತಿ

ಸುಬ್ರತಾ ರಾಯ್ ಜಾಮೀನು ಅರ್ಜಿ ವಜಾ, ಮಾ.25ರವರೆಗೆ ಜೈಲೇ ಗತಿ
Published On :

ನವದೆಹಲಿ: ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಸಹರಾ ಮುಖ್ಯಸ್ಥ ಸುಬ್ರತಾ ರಾಯ್ ಗೆ ಭಾರಿ ಹಿನ್ನಡೆಯಾಗಿದೆ. ಸುಬ್ರತಾ ರಾಯ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಗುರುವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಸುಬ್ರತಾ ರಾಯ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಪ್ರಕರಣದ ವಿಚಾರಣೆಯನ್ನು ಮಾರ್ಚ್,25ಕ್ಕೆ ಮುಂದೂಡಿದೆ.

ಸಹಾರಾ ಸಂಸ್ಥೆಯ ಹೂಡಿಕೆದಾರರ 20,000 ಕೋಟಿ ಮೌಲ್ಯದ ಷೇರುಗಳನ್ನು ಹಿಂದಿರುಗಿಸಲು ವಿಫಲವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಆದರೆ ನ್ಯಾಯಾಲಯದ ಮುಂದೆ ಅವರು ಹಾಜರಾಗಲು ವಿಫಲರಾದ ಹಿನ್ನಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿತ್ತು.

ತದ ನಂತರ ಪೊಲೀಸರಿಗೆ ಶರಣಾದ ಸುಬ್ರತಾ ರಾಯ್, ನ್ಯಾಯಾಲಯದಲ್ಲಿ ಕ್ಷಮೆಯಾಚಿಸಿದ್ದರು. ಸುಬ್ರತಾ ರಾಯ್ ಅವರ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಬಂಧಿಸಲು ಆದೇಶಿಸಿತ್ತು. ಹೂಡಿಕೆದಾರರ ಹಣ ವಾಪಸ್ ನೀಡಿದ ಮೇಲೆ ಸುಬ್ರತಾ ರಾಯ್ ಬಿಡುಗಡೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ನ್ಯಾಯಾಲಯ ಹೇಳಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.