ಈಗಿನ ಸುದ್ದಿ

ತೇಜ್‌ಪಾಲ್ ಜಾಮೀನು ಅರ್ಜಿ ವಜಾ

ತೇಜ್‌ಪಾಲ್ ಜಾಮೀನು ಅರ್ಜಿ ವಜಾ
Published On :

ಪಣಜಿ: ತಾಯಿಯು ಅನಾರೋಗ್ಯದಿಂದ ಬಳಲುತ್ತಿದ್ದು ಜಾಮೀನು ನೀಡುವಂತೆ ಕೋರಿ ತರುಣ್ ತೇಜ್‌ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ಜಾಮೀನು ನೀಡಲು ನಿರಾಕರಿಸಿರುವ ಗೋವಾ ಜಿಲ್ಲಾ ನ್ಯಾಯಾಲಯ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ಭೇಟಿ ಮಾಡಲು ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅವರಿಗೆ ಅನುಮತಿ ದೊರೆತಿದೆ.

ನನ್ನ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ದರಿಂದ ತಾಯಿಯ ಭೇಟಿಗೆ ಅನುಮತಿ ನೀಡಬೇಕು ಎಂದು ತೇಜ್‌ಪಾಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಜಾಮೀನು ನಿರಾಕರಿಸಿದ ನ್ಯಾಯಾಲಯ ತಾಯಿ ಭೇಟಿಗೆ ಅನುಮತಿ ನೀಡಿದೆ.

ಗೋವಾದ ಪಂಚತಾರ ಹೋಟೆಲೊಂದರಲ್ಲಿ ಆಯೋಜಿಸಲಾಗಿದ್ದ ತೆಹಲ್ಕಾ ಪತ್ರಿಕೆಯ ಕಾರ್ಯಕ್ರಮದ ವೇಳೆ ಕಿರಿಯ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಳೆದ ನವೆಂಬರ್ 30ರಂದು ತೇಜ್ಪಾಲ್‌ರನ್ನು ಗೋವಾ ಪೊಲೀಸರು ಬಂಧಿಸಿದ್ದರು.

ಈ ಸಂಬಂಧ ಪೊಲೀಸರು ತೇಜ್‌ಪಾಲ್ ವಿರುದ್ಧ ಗೋವಾ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.