ಈಗಿನ ಸುದ್ದಿ

ದೆಹಲಿ ಗ್ಯಾಂಗ್ ರೇಪ್ ಪ್ರಕರಣ: ಇಬ್ಬರ ಗಲ್ಲು ಶಿಕ್ಷೆಗೆ ತಡೆಯಾಜ್ಞೆ

ದೆಹಲಿ ಗ್ಯಾಂಗ್ ರೇಪ್ ಪ್ರಕರಣ: ಇಬ್ಬರ ಗಲ್ಲು ಶಿಕ್ಷೆಗೆ ತಡೆಯಾಜ್ಞೆ
Published On :

ನವದೆಹಲಿ: ದೆಹಲಿ ಗ್ಯಾಂಗ್ ರೇಪ್ ಪ್ರಕರಣದ ಇಬ್ಬರು ಅಪರಾಧಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಶನಿವಾರ ತಡೆಯಾಜ್ಞೆ ಹಾಕಿದೆ.

ಪ್ರಕರಣ ಸಂಬಂಧ ನಾಲ್ವರು ಅಪರಾಧಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಇವರಲ್ಲಿ ಇಬ್ಬರು ಅಪರಾಧಿಗಳ ಗಲ್ಲು ಶಿಕ್ಷೆಗೆ ಮಾರ್ಚ್ 31ರವರೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಹಾಕಿದೆ.

ದೆಹಲಿ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿಗಳಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದನ್ನು ಪ್ರಶ್ನಿಸಿ ಗಲ್ಲು ಶಿಕ್ಷೆಯ ಅಪರಾಧಿಗಳಾದ ಮುಖೇಶ್ ಮತ್ತು ಪವನ್ ಇಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ಮಾರ್ಚ್ 31ರವರೆಗೆ ಗಲ್ಲು ಶಿಕ್ಷೆಗೆ ತಡೆ ಹಾಕಿದೆ.

ಸಾಮೂಹಿಕ ಅತ್ಯಾಚಾರ ನಡೆಸಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನಿರ್ಭಯ ಸಾವಿಗೆ ಕಾರಣರಾದ ಆರು ಮಂದಿಯಲ್ಲಿ ನಾಲ್ವರಿಗೆ ಸಾಕೇತ್ ಕೋರ್ಟ್ ಮರಣದಂಡನೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ನಾಲ್ವರು ಅಪರಾಧಿಗಳಾದ ವಿನಯ್, ಅಕ್ಷಯ್, ಪವನ್ ಗುಪ್ತಾ ಹಾಗೂ ಮುಖೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅಪರಾಧಿಗಳು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ಸಾಕೇತ್ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು.

ಪ್ರಕರಣದ ಬಾಲಪರಾಧಿಗೆ ಆ.31ರಂದು ಬಾಲಾಪಾರಾಧಿಗಳ ನ್ಯಾಯಾಲಯವು 3 ವರ್ಷಕ್ಕೆ ಶಿಕ್ಷೆ ವಿಧಿಸಿ ಪರಿವರ್ತನಾ ಕೇಂದ್ರಕ್ಕೆ ರವಾನಿಸಿದೆ.

ಪ್ರಕರಣದ ಮತ್ತೊಬ್ಬ ಆರೋಪಿ ರಾಮ್ ಸಿಂಗ್ ಎಂಬುವವನು ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು.

2012 ಡಿಸೆಂಬರ್ 16ರಂದು ಚಲಿಸುತ್ತಿದ್ದ ಬಸ್‌ನಲ್ಲಿ 23 ವರ್ಷದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ನಿರ್ಭಯಾ ಮೇಲೆ ಈ ಆರು ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.