ಬೆಂಗಳೂರಿನಲ್ಲಿ ಕೇಜ್ರಿವಾಲ್ ರೋಡ್ ಶೋ ಆರಂಭ

ಬೆಂಗಳೂರು: ದೆಹಲಿ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ನಗರಕ್ಕೆ ಆಗಮಿಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಬ್ಬಾಳದ ಗಂಗಾನಗರದವರೆಗೆ ಕಾರಿನಲ್ಲಿ ಆಗಮಿಸಿ, ಅಲ್ಲಿಂದ ತೆರೆದ ಜೀಪಿನಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ.
ಇಂದು ಬೆಳಗ್ಗೆ 9.30ಕ್ಕೆ ಗಂಗಾನಗರದಿಂದ ಆರಂಭವಾದ ಕೇಜ್ರಿವಾಲ್ ರೋಡ್ ಶೋ, ಆರ್‌ಟಿ ನಗರ, ಇಂಡಿಯನ್ ಎಕ್ಸ್‌ಪ್ರೆಸ್ ಸರ್ಕಲ್ ಹಾಗೂ ಶಾಂತಿನಗರದ ಮೂಲಕ ಈಗ ಜಯನಗರದತ್ತ ಸಾಗಿದೆ. ಕೇಜ್ರಿವಾಲ್ ರೋಡ್ ಶೋಗೆ ಬೆಂಗಳೂರಿನ ಜನರಿಂದ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.
ಮಧ್ಯಾಹ್ನ ಜಯನಗರ 4ನೇ ಹಂತದಿಂದ ಸೌತ್ ಎಂಡ್ ಸರ್ಕಲ್, ಡಿವಿಜಿ ರಸ್ತೆ ಮೂಲಕ ಗಾಂಧಿ ಬಜಾರ್, ರಾಮಕೃಷ್ಣ ಆಶ್ರಮ, ಚಾಮರಾಜಪೇಟೆ, ಮೈಸೂರು ವೃತ್ತದ ಮೂಲಕ ವಿಜಯನಗರ, ಬಳಿಕ ರಾಮಮಂದಿರ, ಶಿವನಹಳ್ಳಿ, ಮಂಜುನಾಥ್ ನಗರ ಮೂಲಕ ಶಂಕರಮಠ, ಮೋದಿ ಆಸ್ಪತ್ರೆ ರಸ್ತೆ ಮೂಲಕ ನವರಂಗ್, ಕೆ.ಜಿ.ಜನರಲ್ ಆಸ್ಪತ್ರೆ, ಸಂಪಿಗೆ ರಸ್ತೆ ಮೂಲಕ ಮಲ್ಲೇಶ್ವರಂ 8ನೇ ಕ್ರಾಸ್ ತಲುಪಲಿದೆ. ಅಲ್ಲಿಂದ ಸಂಜೆ 7.30ಕ್ಕೆ ಸ್ಯಾಂಕಿಟ್ಯಾಂಕ್ ರಸ್ತೆ, ಕಾವೇರಿ ಜಂಕ್ಷನ್ ಮೂಲಕ ರಾಷ್ಟ್ರೀಯ ಸೈನಿಕ ಸ್ಮಾರಕ ತಲುಪಲಿದ್ದಾರೆ. ಅಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಕೇಜ್ರಿವಾಲ್ ಭಾಷಣ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


