ಈಗಿನ ಸುದ್ದಿ

ಟಿ20 ವಿಶ್ವಕಪ್ ಬಳಿಕ ಸಂಗಕ್ಕಾರ ವಿದಾಯ

ಟಿ20 ವಿಶ್ವಕಪ್ ಬಳಿಕ ಸಂಗಕ್ಕಾರ ವಿದಾಯ
Published On :

ಢಾಕಾ: ಖ್ಯಾತ ಕ್ರಿಕೆಟಿಗ ಮತ್ತು ಶ್ರೀಲಂಕಾ ಕ್ರಿಕೆಟ್ ತಂಡ ಹಿರಿಯ ಆಟಗಾರ ಕುಮಾರ್ ಸಂಗಕ್ಕಾರ ಅವರು ಟಿ20 ಕ್ರಿಕೆಟ್ ಮಾದರಿಗೆ ವಿದಾಯ ಹೇಳಲಿದ್ದಾರೆ.

ಪ್ರಸ್ತುತ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಟಿ20 ವಿಶ್ಪಕಪ್ ನಂತರ ಕುಮಾರ ಸಂಗಕ್ಕಾರ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ. 36 ವರ್ಷದ ಆಟಗಾರ ಸಂಗಕ್ಕಾರ ಅವರು ಶ್ರೀಲಂಕಾದ ದಿನಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಿರಿಯ ಆಟಗಾರರಿಗೆ ತಂಡದಲ್ಲಿ ಅವಕಾಶ ಮಾಡಿಕೊಡುವ ಸಲುವಾಗಿ ಹಿರಿಯ ಆಟಗಾರರು ಕೆಲವು ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವ ಅವಶ್ಯಕತೆ ಇದೆ. ಈ ಹಿನ್ನಲೆಯಲ್ಲಿ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಖಂಡಿತವಾಗಿಯೂ ಇದು ನನ್ನ ಕೊನೆಯ ಟಿ20 ವಿಶ್ವಕಪ್. ಈ ವಿಚಾರವನ್ನು ಹೇಳಲು ನನಗೆ ಕಷ್ಟವಾಗುತ್ತದೆ. ಆದರೆ ಇದು ಸತ್ಯ. ಎಂದು ಕುಮಾರ ಸಂಗಕ್ಕಾರ ಹೇಳಿದ್ದಾರೆ.

ಇದೇ ವೇಳೆ ಐಪಿಎಲ್ ನಂತಹ ಫ್ರಾಂಚೈಸಿ ಕ್ರಿಕೆಟ್ ಮಾದರಿಯಲ್ಲಿ ತಾವು ಟಿ20 ಆಟವನ್ನು ಮುಂದುವರೆಸುತ್ತೇನೆ ಎಂದು ಸಂಗಕ್ಕಾರ ಸ್ಪಷ್ಟಪಡಿಸಿದ್ದಾರೆ. ಈ ವರೆಗೂ 50 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿರುವ ಸಂಗಕ್ಕಾರ 32.77 ಸರಾಸರಿಯಲ್ಲಿ 1,311 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿ 7 ಅರ್ಧ ಶತಕಗಳು ಕೂಡ ದಾಖಲಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.