ಡಿಎಂಕೆ ತೊರೆಯುವ ಪ್ರಶ್ನೆಯೇ ಇಲ್ಲ: ಅಳಗಿರಿ

ಚೆನ್ನೈ: ಪಕ್ಷದಿಂದ ತಮ್ಮನ್ನು ಉಚ್ಛಾಟಿಸಿದ್ದರೂ ಕೂಡ ತಾವು ಡಿಎಂಕೆ ಪಕ್ಷವನ್ನು ತೊರೆಯುವುದಿಲ್ಲ ಎಂದು ಡಿಎಂಕೆ ಪಕ್ಷ ಉಚ್ಛಾಟಿತ ಮುಖಂಡ ಮತ್ತು ಕರುಣಾನಿಧಿ ಅವರ ಹಿರಿಯ ಪುತ್ರ ಎಂ.ಕೆ.ಅಳಗಿರಿ ಹೇಳಿದ್ದಾರೆ.
ಮುಧುರೈನಲ್ಲಿ ಮಾತನಾಡಿದ ಅಳಗಿರಿ ಅವರು, 'ಪ್ರಸ್ತುತ ನಾನು ಪಕ್ಷ ತೊರೆಯುವ ಕುರಿತು ವಿಚಾರ ಮಾಡಿಲ್ಲ. ಪಕ್ಷದಿಂದ ನನ್ನನ್ನು ಉಚ್ಛಾಟಿಸಿರಬಹುದು. ಆದರೆ ನಾನು ಇಂದಿಗೂ ಡಿಎಂಕೆ ಪಕ್ಷದ ಸದಸ್ಯನಾಗಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೆ ಶೀಘ್ರದಲ್ಲಿಯೇ ತಾವು ತಮ್ಮ ಬೆಂಬಲಿಗರ ಸಭೆ ಕರೆಯಲಿದ್ದು, ಸಭೆಯ ನಂತರ ತಮ್ಮ ಮುಂದಿನ ನಿರ್ಧಾರವನ್ನು ಪ್ರಕಟಿಸುವುದಾಗಿ' ತಿಳಿಸಿದರು.
ಪಕ್ಷದ ಉತ್ತರಾಧಿಕಾರತ್ವ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ತಂದೆ ಕರುಣಾನಿಧಿ ಅವರೊಂದಿಗೆ ಜಗಳ ಮಾಡಿಕೊಂಡಿದ್ದ ಅಳಗಿರಿ ಅವರು, ಈ ಹಿಂದೆ ತಮ್ಮ ಸಹೋದರ ಸ್ಟಾಲಿನ್ರನ್ನು ಕೊಲ್ಲುವುದಾಗಿ ಪರೋಕ್ಷ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಪಕ್ಷದ ಮುಖಂಡ ಎಂ.ಕರುಣಾನಿಧಿ ಅವರು ಪಕ್ಷವಿರೋಧಿ ಚಟುವಟಿಕೆ ಮಾಡಿದ ಆರೋಪ ಹೊರಿಸಿ ಅಳಗಿರಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದರು.
ನಂತರ ಅಳಗಿರಿ ಅವರು ಬಿಜೆಪಿ ಸೇರುತ್ತಾರೆ ಎನ್ನುವ ಕುರಿತು ಹಲವು ಊಹಾಪೋಹಗಳು ಹರಿದಾಡಿದ್ದವು. ಈ ಬಗ್ಗೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರೊಂದಿಗೆ ಅಳಗಿರಿ ಮಾತಕುತೆ ನಡೆಸಿದ್ದಾರೆ ಎಂದು ಕೂಡ ಸುದ್ದಿ ಹಬ್ಬಿತ್ತು. ಈ ಹಿನ್ನಲೆಯಲ್ಲಿ ಇಂದು ಮಾಧ್ಯಮಗಳಲ್ಲಿ ಸ್ಫಷ್ಟೀಕರಣ ನೀಡಿರುವ ಅಳಗಿರಿ ಅವರು ತಾವು ಡಿಎಂಕೆ ಪಕ್ಷವನ್ನು ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


