ಬಿಎಂಟಿಸಿ ಬಸ್ನಲ್ಲಿ ಯುವತಿ ಮೇಲೆ ಅತ್ಯಾಚಾರ ಯತ್ನ: ಚಾಲಕನ ಬಂಧನ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ನಲ್ಲಿ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಮಾರ್ಚ್ 14ರಂದು ರಾತ್ರಿ ಪೀಣ್ಯ ಡಿಪೋಗೆ ಸೇರಿದ ಪುಷ್ಪಕ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಸ್ನ ಚಾಲಕ ಕಂ ನಿರ್ವಾಹಕ ಸಿದ್ದಾರ್ಥ್ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವುದಾಗಿ ಪಂಜಾಬ್ ಮೂಲದ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.
ದೂರು ದಾಖಲಿಸಿಕೊಂಡಿರುವ ಚಾಮರಾಜಪೇಟೆ ಪೊಲೀಸರು, ಆರೋಪಿಯನ್ನು ಬಂಧಿಸಿ, ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ಮಾರ್ಚ್ 26ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ
ಇದೇ ವೇಳೆ ಲೈಂಗಿಕ ಹಲ್ಲೆಗೊಳಗಾಗಿ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಸ್ತುತ ಚಾಲಕನನ್ನು ಅಮಾನತು ಮಾಡಲಾಗಿದ್ದು, ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಆತನ ವಿರುದ್ಧ ಐಪಿಸಿ ಸೆಕ್ಷನ್ 341,342 ಮತ್ತು 354 (ಎ) ಪ್ರಕರಣದಡಿಯಲ್ಲಿ ದೂರು ದಾಖಲಿಸಲಾಗಿದೆ. ಅಂತೆಯೇ ಹಲ್ಲೆಗೊಳಗಾದ ಯುವತಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


