ಕೇಜ್ರಿವಾಲ್ ಮೋದಿಯನ್ನು 1 ಲಕ್ಷ ಮತಗಳ ಅಂತರದಿಂದ ಸೋಲಿಸುತ್ತಾರೆ

ನವದೆಹಲಿ: ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನು ಸೋಲಿಸಿದ ನಂತರ ಆಮ್ ಆದ್ಮಿ ಪಕ್ಷ, ಲೋಕಸಭೆ ಚುನಾವಣೆಯಲ್ಲೂ ತನ್ನ ವಿಜಯ ಯಾತ್ರೆಯನ್ನು ಮುಂದುವರೆಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದೆ.
ಲೋಕಸಭೆ ಚುನಾವಣೆಯಲ್ಲಿ ಅಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಾರಾಣಸಿಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಕನಿಷ್ಟ 1 ಲಕ್ಷ ಮತಗಳ ಅಂತರದಿಂದ ಸೋಲಿಸಲಿದ್ದಾರೆ ಎಂದು ಆಪ್ ನಾಯಕ ಸಂಜಯ್ ಸಿಂಗ್ ಅವರು ಹೇಳಿದ್ದಾರೆ.
ವಾರಾಣಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಪ್ರಬಲ ಅಭ್ಯರ್ಥಿ ಅಲ್ಲ ಎಂದಿರುವ ಸಂಜಯ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮೋದಿ ವಿರುದ್ಧ ಸ್ಪರ್ಧಿಸಲಿ ಎಂದು ಒತ್ತಾಯಿಸಿದ್ದಾರೆ.
ನಿನ್ನೆಯಷ್ಟೆ ಮೋದಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ದಿಗ್ವಿಜಯ್ ಸಿಂಗ್ ಅವರು ಸ್ಪರ್ಧಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಬಗ್ಗೆ ಕಾಂಗ್ರೆಸ್ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.
ಬಿಜೆಪಿ ಪ್ರಧಾನಿ ಅಭ್ಯರ್ಥಿಯನ್ನು ಸೋಲಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಅವರಿಗೆ ಬೆಂಬಲ ನೀಡಲಿದೆ ಎಂಬ ವರದಿಗಳನ್ನು ಕಾಂಗ್ರೆಸ್ ಸ್ಪಷ್ಟವಾಗಿ ತಳ್ಳಿಹಾಕಿದ್ದು, ವಾರಾಣಸಿಯಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಹೇಳಿದೆ. ಆದರೆ ಅಭ್ಯರ್ಥಿ ಯಾರೆಂದು ಈವರೆಗೂ ಹೇಳಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


