ಈಗಿನ ಸುದ್ದಿ

ಲೋಕಸಮರ: ಮಾಜಿ ಸಿಎಂಗಳಿಂದ ನಾಮಪತ್ರ ಸಲ್ಲಿಕೆ

ಲೋಕಸಮರ: ಮಾಜಿ ಸಿಎಂಗಳಿಂದ ನಾಮಪತ್ರ ಸಲ್ಲಿಕೆ
Published On :

ಶಿವಮೊಗ್ಗ: ಲೋಕಸಭಾ ಚುನಾವಣಾ ಪ್ರಯುಕ್ತ ಗುರುವಾರ ಮಾಜಿ ಮುಖ್ಯಮಂತ್ರಿಗಳು ತಮ್ಮ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ವೀರಪ್ಪ ಮೊಯಿಲಿ ಅವರು ಇಂದು ಬೆಳಗ್ಗೆ ತಮ್ಮ ಬೆಂಬಲಿಗರೊಂದಿಗೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಚಿಕ್ಕಬಳ್ಳಾಪುರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ನಾಮಪತ್ರಸಲ್ಲಿಸಿದರು. ಅಂತೆಯೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿ ಮತ್ತು ಬೆಂಗಳೂರು ಉತ್ತರ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಗುಲ್ಬರ್ಗಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ಬೀದರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಮತ್ತು ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರು ನಾಮಪತ್ರಸಲ್ಲಿಸಿದ್ದಾರೆ. ಉಳಿದಂತೆ ಕೋಲಾರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಎಚ್.ಮುನಿಯಪ್ಪ ಹಾಗೂ ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ್ ಸಿಂಹ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಬೆಂಗಳೂರು ಉತ್ತರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಿಜ್ವಾನ್ ಅರ್ಶದ್ ಅವರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟಾರೆ ಇಂದು ಒಟ್ಟು 50 ಅಭ್ಯರ್ಥಿಗಳ ತಮ್ಮ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.