ಈಗಿನ ಸುದ್ದಿ

ಟಿಕೆಟ್ ಗಾಗಿ ಹಣ: ಇಬ್ಬರು 'ಆಪ್' ನಾಯಕರ ಉಚ್ಛಾಟನೆ

ಟಿಕೆಟ್ ಗಾಗಿ ಹಣ: ಇಬ್ಬರು 'ಆಪ್' ನಾಯಕರ ಉಚ್ಛಾಟನೆ
Published On :

ನವದೆಹಲಿ: ಹಣ ನೀಡಿದರೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದ ಇಬ್ಬರು ಆಮ್ ಆದ್ಮಿ ಮುಖಂಡರನ್ನು ಪಕ್ಷದಿಂದ ವಜಾ ಮಾಡಲಾಗಿದೆ.

ಲೋಕಸಭಾ ಚುನಾವಣೆಗೆ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಹಣ ಪಡೆಯಲು ಮುಂದಾಗಿದ್ದ ಇಬ್ಬರು 'ಆಪ್' ಮುಖಂಡರನ್ನು ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಅವರು ಪಕ್ಷದಿಂದ ಉಚ್ಛಾಟಿಸಿದ್ದಾರೆ. ಈ ವಿಚಾರವನ್ನು ಸ್ವತಃ ಅರವಿಂದ್ ಕೇಜ್ರಿವಾಲ್ ಬಹಿರಂಗ ಪಡಿಸಿದ್ದು, ಮುಂದೆ ಇಂತಹ ತಪ್ಪುಗಳಾಗದಂತೆ ಎಚ್ಚರವಹಿಸುವುದಾಗಿ ಹೇಳಿದ್ದಾರೆ. ಅಲ್ಲದೆ ಮುಂದೆ ಇಂತಹ ತಪ್ಪಿಗೆ ಮುಂದಾಗುವ ಎಲ್ಲ ನಾಯಕರಿಗೆ ಇದೇ ಶಿಕ್ಷೆ ಇರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

'ಉತ್ತರ ಪ್ರದೇಶದ ಯಾವುದಾದರು ಒಂದು ಕ್ಷೇತ್ರದಿಂದ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಹಣ ಪಡೆಯಲು ಹವಣಿಸಿದ್ದ ಅರುಣ್ ಸಿಂಗ್ ಮತ್ತು ಇನ್ನೋರ್ವ ಮುಖಂಡನನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಆದರೆ ನನ್ನ ಗಮನಕ್ಕೆ ಬಂದಂತೆ ಇಲ್ಲಿ ಯಾವುದೇ ರೀತಿಯ ಹಣ ವರ್ಗಾವಣೆಯಾಗಿಲ್ಲ. ಕೇವಲ ಆ ಬಗ್ಗೆ ಮಾತುಕತೆ ನಡೆದಿದ್ದು, ಇದೀಗ ಈ ಇಬ್ಬರು ನಾಯಕರನ್ನು ಪಕ್ಷದಿಂದ ವಜಾ ಮಾಡಲಾಗಿದೆ' ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅಂತೆಯೇ 'ಈಗಾಗಲೇ ಘೋಷಣೆಯಾಗಿರುವ ಆಪ್ ಪಕ್ಷದ ಅಭ್ಯರ್ಥಿಗಳ ವಿರುದ್ಧ ಯಾವುದೇ ನಂಬಲರ್ಹ ಆರೋಪಗಳಿದ್ದರೆ, ಅಂತಹ ಅಭ್ಯರ್ಥಿಗಳ ಟಿಕೆಟ್ ಅನ್ನು ಕೂಡ ರದ್ದು ಮಾಡಲಾಗುತ್ತದೆ' ಎಂದು ಕೇಜ್ರಿವಾಲ್ ಸ್ಪಷ್ಟಪಡಿಸಿದರು. ಮೂಲಗಳ ಪ್ರಕಾರ ಹಣಕ್ಕಾಗಿ ಟಿಕೆಟ್ ನೀಡಲು ಮುಂದಾಗಿದ್ದ ಅರುಣ್ ಸಿಂಗ್ ಅವರ ಟೆಲಿಫೋನ್ ಸಂಭಾಷಣೆ ಕೇಜ್ರಿವಾಲ್ ಅವರಿಗೆ ಕಾರ್ಯಕರ್ತರು ನೀಡಿದ್ದು, ಇದರ ಆಧಾರದ ಮೇಲೆ ಈ ಇಬ್ಬರು ನಾಯಕರನ್ನು ಕೇಜ್ರಿವಾಲ್ ಪಕ್ಷದಿಂದ ಉಚ್ಛಾಟಿಸಿದ್ದಾರೆ ಎನ್ನಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.