ಈಗಿನ ಸುದ್ದಿ

ಬೀದರ್ ಬಿಜೆಪಿ ಟಿಕೆಟ್: ಬಿಎಸ್‌ವೈಗೆ ಹಿನ್ನಡೆ

ಬೀದರ್ ಬಿಜೆಪಿ ಟಿಕೆಟ್: ಬಿಎಸ್‌ವೈಗೆ ಹಿನ್ನಡೆ
Published On :

ಬೆಂಗಳೂರು: ಬೀದರ್ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯದ ಉಳಿದ ಮೂರು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಶುಕ್ರವಾರ ಪ್ರಕಟಿಸಿದ್ದು, ಬೀದರ್‌ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗ ಗುರುಪಾದಪ್ಪ ನಾಗಮಾರಪಲ್ಲಿ ಅವರ ಪುತ್ರನಿಗೆ ಟಿಕೆಟ್ ಕೈ ತಪ್ಪಿದೆ. ಇದು ಯಡಿಯೂರಪ್ಪ ಅವರಿಗೆ ಭಾರಿ ಹಿನ್ನಡೆ ಉಂಟು ಮಾಡಿದೆ.

ತಮ್ಮ ಬೆಂಬಲಿಗರಾದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಿಂದ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದಿಂದ ಬಸವರಾಜ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದ ಯಡಿಯೂರಪ್ಪ, ನಾಗಮಾರಪಲ್ಲಿಗೆ ಟಿಕೆಟ್ ಧಕ್ಕಿಸಿಕೊಳ್ಳುವಲ್ಲಿ ವಿಫಲವಾಗಿದ್ದಾರೆ.

ಕೆಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದ ಗುರುಪಾದಪ್ಪ ನಾಗಮಾರಪಲ್ಲಿ ಅವರು ಕೆಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಯಡಿಯೂರಪ್ಪ ಅವರು ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವ ಭರವಸೆ ನೀಡಿದ ಬಳಿಕ ನಾಗಮಾರಪಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.

ಶಾಸಕ ನಾಗಮಾರಪಲ್ಲಿ ಪುತ್ರ ಸೂರ್ಯಕಾಂತ್ ನಾಗಮಾರಪಲ್ಲಿ ಬೀದರ್‌ನ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಸೂರ್ಯಕಾಂತ್‌ಗೆ ಟಿಕೆಟ್ ನೀಡದೇ ಯೋಗ ಗುರು ಬಾಬಾ ರಾಮ್‌ದೇವ್ ಅವರ ಬೆಂಬಲಿಗ ಭಗವಂತ ಖೂಬಾ ಅವರಿಗೆ ಟಿಕೆಟ್ ನೀಡಿದೆ. ಇದು ಸಹಜವಾಗಿಯೇ ನಾಗಮಾರಪಲ್ಲಿ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಟಿಕೆಟ್ ಘೋಷಿಸುತ್ತಿದ್ದಂತೆ ನಾಗಮಾರಪಲ್ಲಿ ಬೆಂಬಲಿಗರು ಬೀದರ್ ಜಿಲ್ಲಾ ಬಿಜೆಪಿ ಕಚೇರಿ ಮೇಲೆ ದಾಳಿ ಮಾಡಿ ಪಿಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಇದರಿಂದ ಬೀದರ್ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿಮಾರ್ಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.