ಈಗಿನ ಸುದ್ದಿ

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ: ಕುಮಾರ್ ಬಂಗಾರಪ್ಪ

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ: ಕುಮಾರ್ ಬಂಗಾರಪ್ಪ
Published On :

ಶಿವಮೊಗ್ಗ: ಕಾಂಗ್ರೆಸ್‌ನಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧವೇ ಬಂಡಾಯವೆದ್ದಿರುವ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು, ಸ್ವತಂತ್ರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಶನಿವಾರ ಹೇಳಿದ್ದಾರೆ.

ಕಾಂಗ್ರೆಸ್ ಟಿಕೆಟ್ ವಂಚಿತ ಕುಮಾರ್ ಬಂಗಾರಪ್ಪ ಇಂದು ಶಿವಮೊಗ್ಗದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ತಮಗೆ ಟಿಕೆಟ್ ನೀಡದಿರುವುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಟಿಕೆಟ್ ನೀಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ. ಆದರೆ ತಾವು ಮಾರ್ಚ್ 26ರಂದು ಮಧ್ಯಾಹ್ನ 1 ಗಂಟೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದು ಖಚಿತ ಎಂದರು.

ಈಗಲೂ ಪಕ್ಷ ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ. ಈ ಸಂಬಂಧ ನಾಳೆ ತಾವು ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್‌ನೊಂದಿಗೆ ಚರ್ಚಿಸುವುದಾಗಿ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಅಲ್ಲದೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಮಾರ್ಚ್ 26ರವರೆಗೂ ಕಾಯುತ್ತೇನೆ. ಒಂದು ಪಕ್ಷ ಟಿಕೆಟ್ ನೀಡದಿದ್ದರೂ ತಾವು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಹೇಳಿದ್ದಾರೆ.

ಇದೇ ವೇಳೆ ತಮ್ಮ ಸಹೋದರ ಮಧು ಬಂಗಾರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರ್ ಬಂಗಾರಪ್ಪ, ಮಧು ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹಾಗೂ ತಾಯಿ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರೇ ಗೀತಾ ಶಿವರಾಜ್‌ಕಮಾರ್ ಅವರಿಗೆ ಟಿಕೆಟ್ ಕೊಡಿಸಿದ್ದಾರೆ. ಆದರೆ ಅವರ ಆಟ ಶಿವಮೊಗ್ಗದಲ್ಲಿ ನಡೆಯುವುದಿಲ್ಲ. ಗೀತಾ ಶಿವರಾಜ್ ಕುಮಾರ್ ಸೋಲುವುದು ಖಚಿತ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.