ಜಸ್ವಂತ್ ಬೆಂಬಲಿಗರಿಂದ ಬಿಜೆಪಿ ಕಚೇರಿ ಮೇಲೆ ದಾಳಿ

ಬರ್ಮರ್/ ನವದೆಹಲಿ : ಬರ್ಮರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರಿಗೆ ಟಿಕೆಟ್ ನಿರಾಕರಣೆ ಮಾಡಿರುವುದನ್ನು ಖಂಡಿಸಿ ಜಸ್ವಂತ್ ಸಿಂಗ್ ಬೆಂಬಲಿಗರು ಜೈಸಲ್ಮೇರ್ನಲ್ಲಿರುವ ಬಿಜೆಪಿ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.
ಗುಂಪು ಗುಂಪಾಗಿ ಬಂದ ಜಸ್ವಂತ್ ಬೆಂಬಲಿಗರು ಪಕ್ಷದ ಕಚೇರಿಗೆ ನುಗ್ಗಿ ದಾಂಧಲೆ ಮಾಡಿರುವುದಾಗಿ ಬಲ್ಲಮೂಲಗಳು ವರದಿ ಮಾಡಿವೆ.
ಬರ್ಮರ್ನಲ್ಲಿ ಟಿಕೆಟ್ ಸಿಗದಿರುವುದಕ್ಕೆ ಅಸಮಧಾನ ವ್ಯಕ್ತ ಪಡಿಸಿದ ಜಸ್ವಂತ್ ಸಿಂಗ್ ಪಕ್ಷದ ವಿರುದ್ಧವೇ ಕಿಡಿ ಕಾರಿದ್ದಾರೆ. ಬಿಜೆಪಿ ಪಕ್ಷದಲ್ಲಿ ಎರಡು ಗುಂಪುಗಳಿದ್ದು ಒಂದು ರಿಯಲ್ ಇನ್ನೊಂದು ನಕಲಿ ಎಂದು ಹೇಳುವ ಮೂಲಕ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇದೀಗ ಪಕ್ಷದಲ್ಲಿ ನಕಲಿ ರಾಜಕಾರಣಿಗಳದ್ದೇ ಪ್ರಾಬಲ್ಯ ನಡೆಯುತ್ತಿದೆ ಎಂದು ಸಿಂಗ್ ಹೇಳಿದ್ದಾರೆ.
ಪಕ್ಷದ ನಡೆಯಿಂದ ಅಸಮಾಧಾನಗೊಂಡಿರುವ ಸಿಂಗ್ ಭಾನುವಾರ ಬಿಜೆಪಿಗೆ ರಾಜಿನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಅದೇ ವೇಳೆ ತಾವು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮಾರ್ಚ್ 24ರಂದು ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


