ಈಗಿನ ಸುದ್ದಿ

ಮೌಂಟ್ ಎಲಿಜಬೆತ್ ಆಸ್ಪತ್ರೆಯಿಂದ 'ಅಂಬಿ' ಡಿಸ್ಚಾರ್ಜ್

ಮೌಂಟ್ ಎಲಿಜಬೆತ್ ಆಸ್ಪತ್ರೆಯಿಂದ 'ಅಂಬಿ' ಡಿಸ್ಚಾರ್ಜ್
Published On :

ಸಿಂಗಾಪುರ: ನಟ, ವಸತಿ ಸಚಿವ ಅಂಬರೀಶ್ ಅವರ ಆರೋಗ್ಯ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಮೌಂಟ್ ಎಲಿಜಬೆತ್ ಆಸ್ಪತ್ರೆಯಿಂದ ಶನಿವಾರ ಡಿಸ್ಚಾರ್ಜ್ ಮಾಡಲಾಗಿದೆ.

ಕಳೆದ ಮೂರು ವಾರಗಳಿಂದ ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಂಬರೀಶ್ ಅವರ ಆರೋಗ್ಯ ಹೀಗ ಸಮಸ್ಥಿತಿಗೆ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಅಂಬಿ ಸಿಂಗಾಪುರದ ತಮ್ಮ ಸ್ನೇಹಿತನ ಫ್ಲಾಟ್‌ನಲ್ಲಿ ಪತ್ನಿ ಸುಮಲತಾ ವಾಸ್ತವ್ಯ ಹೂಡಿದ್ದಾರೆ.

ತೀವ್ರ ಅನಾರೋಗ್ಯದಿಂದಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಅಂಬರೀಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಾರ್ಚ್ 1 ರಂದು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸಿದ ಅಂಬಿ ಅವರ ಆರೋಗ್ಯದಲ್ಲಿ ದಿನದಿಂದ ದಿನಕ್ಕೆ ಚೇತರಿಕೆ ಕಂಡು ಬಂದಿತ್ತು.

ಕೆಲ ದಿನಗಳ ಹಿಂದೆ ಮಾದ್ಯಮಗಳಲ್ಲಿ ಸ್ವತಃ ಅಂಬರೀಶ್ ಅವರೇ ಮಾತನಾಡಿ ನಾನು ಕ್ಷೇಮವಾಗಿದ್ದೇನೆ. ನನ್ನ ಆರೋಗ್ಯ ಸುಧಾರಿಸುತ್ತಿದೆ. ಆದರೆ ನನಗೆ ಸದ್ಯ ವಿಶ್ರಾಂತಿಯ ಅವಶ್ಯಕತೆ ಇರುವುದರಿಂದ ಇನ್ನು ಒಂದು ವಾರ ಆಸ್ಪತ್ರೆಯಲ್ಲೇ ಇರುವುದಾಗಿ ತಿಳಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.