ಈಗಿನ ಸುದ್ದಿ

ಪಕ್ಷೇತರ ಅಭ್ಯರ್ಥಿಯಾಗಿ ಜಸ್ವಂತ್ ಸಿಂಗ್ ನಾಮಪತ್ರ ಸಲ್ಲಿಕೆ

ಪಕ್ಷೇತರ ಅಭ್ಯರ್ಥಿಯಾಗಿ ಜಸ್ವಂತ್ ಸಿಂಗ್ ನಾಮಪತ್ರ ಸಲ್ಲಿಕೆ
Published On :

ಬಾರ್ಮರ್ (ರಾಜಾಸ್ತಾನ): ಬಿಜೆಪಿ ಪಕ್ಷದ ಹಿರಿಯ ಮುಖಂಡ ಜಸ್ವಂತ್ ಸಿಂಗ್ ಅವರು ಬಾರ್ಮರ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಬಾರ್ಮರ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದ್ದರಿಂದ ಬಂಡಾಯವೆದಿದ್ದ ಜಸ್ವಂತ್ ಸಿಂಗ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಪಕ್ಷೇತರ ಅಭ್ಯರ್ಥಿಯಾಗಿ ನಾಮ ಪತ್ರಸಲ್ಲಿಸಿದ್ದಾರೆ. ಬಾರ್ಮರ್ ಕ್ಷೇತ್ರದಿಂದ ತಮಗೆ ಟಿಕೆಟ್ ದೊರೆಯದ್ದರಿಂದ ಬೇಸರಗೊಂಡಿದ್ದ ಜಸ್ವಂತ್ ಸಿಂಗ್ ಅವರು ನಿನ್ನೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು.

'ಬೇಕಾದಂತೆ ಅಡ್ಜಸ್ಟ್ ಮಾಡಿಕೊಳ್ಳಲು ನಾನೇನು ಕುರ್ಚಿ ಅಥವಾ ಟೇಬಲ್ ಅಲ್ಲ'
ಲೋಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ನಿನ್ನೆ ಸುದ್ದಿಗೋಷ್ಟಿ ಕರೆದಿದ್ದ ಜಸ್ವಂತ್ ಅವರು ಬಿಜೆಪಿ ಮತ್ತು ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ತಮಗೆ ಟಿಕೆಟ್ ನಿರಾಕರಿಸಲು ವಸುಂಧರಾ ರಾಜೇ ಅವರೇ ಕಾರಣ ಎಂದಿದ್ದ ಜಸ್ವಂತ್ ಸಿಂಗ್ ಅವರು ಬಿಜೆಪಿ ಹೈಕಮಾಂಡ್ ವಿರುದ್ಧವೂ ಟೀಕಾ ಪ್ರಹಾರ ನಡೆಸಿದ್ದರು.

'ಮನವಿಯ ನಡುವೆಯೂ ನನನ್ನು ಹೊರತುಪಡಿಸಿ ಬೇರೊಬ್ಬರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಬಗ್ಗೆ ವಿಚಾರಿಸಿದರೆ ನನ್ನನ್ನೇ ಅಡ್ಜಸ್ಟ್ ಮಾಡಿಕೊಳ್ಳುವಂತೆ ಹೇಳಿತ್ತಾರೆ. ಅವರಿಗೆ ಬೇಕಾದಂತೆ ಅಡ್ಜಸ್ಟ್ ಮಾಡಿಕೊಳ್ಳಲು ನಾನೇನು ಕುರ್ಚಿ ಅಥವಾ ಟೇಬಲ್ ಅಲ್ಲ. ಇದು ಅವರ ಸೊಕ್ಕನ್ನು ತೋರಿಸುತ್ತದೆ. ಪಕ್ಷದ ಹಿರಿಯ ಮುಖಂಡನಾದ ನನ್ನನ್ನು ಅವಮಾನಕಾರಿಯಾಗಿ ನಡೆಸಿಕೊಂಡಿದ್ದಾರೆ. ಹೀಗಾಗಿಯೇ ನಾನು ನಾಳೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ' ಎಂದು ಜಸ್ವಂತ್ ಸಿಂಗ್ ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.