ಈಗಿನ ಸುದ್ದಿ

ಬಿಜೆಪಿಗೆ ಡೆಡ್‌ಲೈನ್ ಕೊಟ್ಟ ಮುತಾಲಿಕ್

ಬಿಜೆಪಿಗೆ ಡೆಡ್‌ಲೈನ್ ಕೊಟ್ಟ ಮುತಾಲಿಕ್
Published On :

ಹುಬ್ಬಳ್ಳಿ: ಬೆಳಗ್ಗೆ ಪಕ್ಷಕ್ಕೆ ಸೇರಿಸಿಕೊಂಡು ಸಂಜೆ ಕಿತ್ತು ಹಾಕಿದ್ದ ಬಿಜೆಪಿ ವಿರುದ್ಧ ಕಿಡಿಕಾರಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ನಾಳೆ ಮಧ್ಯಾಹ್ನ 12.30ರ ರೊಳಗೆ ನನ್ನನ್ನು ಪುನಃ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಬಿಜೆಪಿ ನಾಯಕರಿಗೆ ಡೆಡ್‌ಲೈನ್ ನೀಡಿದ್ದಾರೆ.

ಈ ಸಂಬಂಧ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಬಿಜೆಪಿಯಿಂದಲೇ ನನಗೆ ಬುಲಾವ್ ಬಂದಿತ್ತು. ಹೀಗಾಗಿ ನಾನು ನಿನ್ನೆ ಬಿಜೆಪಿಗೆ ಸೇರ್ಪಡೆಗೊಂಡಿದ್ದೇ ಆದರೆ ವಿನಾಕಾರಣ ನನ್ನನ್ನು ಪಕ್ಷದಿಂದ ತೆಗೆದುಹಾಕಿ ನನಗೆ ಅಪಮಾನ ಎಸಗಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮುತಾಲಿಕ್ ಕಣ್ಣೀರಿಟ್ಟರು.

ಬಿಜೆಪಿಯ ಹಿರಿಯ ನಾಯಕ ಅನಂತಕುಮಾರ್‌ರಿಂದಲೇ ನನಗೆ ಕರೆ ಬಂದಿತ್ತು. ಬಿಜೆಪಿಯಿಂದಲೇ ಸ್ಪರ್ಧಿಸುವಂತೆ ಕರೆ ಬಂದಿತ್ತು ಎಂದು ಮುತಾಲಿಕ್ ತಮ್ಮ ಅಳಲನ್ನು ತೊಂಡಿಕೊಂಡರು.

ಈ ವೇಳೆ, ಬಿಜೆಪಿಗೆ ತಮ್ಮ ಸೇರ್ಪಡೆಯನ್ನು ತೀವ್ರವಾಗಿ ವಿರೋಧಿಸಿದ್ದ ಗೋವಾ ಸಿಎಂ ಮನೋಹರ್ ಪರಿಕ್ಕರ್ ವಿರುದ್ಧ ಕಿಡಿಕಾರಿದ ಮುತಾಲಿಕ್, ಗೋವಾದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಪಬ್‌ಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ನಾನು ಸಂಘಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯನಿರ್ವಹಿಸಿದ್ದೀನಿ, ಸಮಾಜಕ್ಕಾಗಿ ನನ್ನ ಜೀವನ ತ್ಯಾಗ ಮಾಡಿದ್ದೇನೆ ಎಂದು ಮುತಾಲಿಕ್ ಹೇಳಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.