ಚಿಕ್ಕಬಳ್ಳಾಪುರದಿಂದ ಎಚ್ಡಿಕೆ ಸ್ಪರ್ಧೆ ಖಚಿತ, ನಾಳೆ ನಾಮಪತ್ರ ಸಲ್ಲಿಕೆ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದ್ದು, ಜೆಡಿಎಸ್ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಚಿಕ್ಕಬಳ್ಳಾಪುರ ಜನತೆಯ ಒತ್ತಾಯಕ್ಕೆ ಮಣಿದು ತಾವು ಚುನಾವಣೆ ಸ್ಪರ್ಧಿಸುತ್ತಿರುವುದಾಗಿ ಮತ್ತು ನಾಳೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ನ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಷರೀಫ್ ಅವರು ಮೈಸೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಕುಮಾರಸ್ವಾಮಿ ಅವರು, ಷರೀಫ್ ಅವರು ಮೆಕ್ಕಾಗೆ ತೆರಳುವ ಮುನ್ನ ಜೆಡಿಎಸ್ನಿಂದ ಸ್ಪರ್ಧಿಸುವುದಾಗಿ ಪ್ರಮಾಣ ಮಾಡಿದ್ದರು. ಅಲ್ಲದೆ ಪಕ್ಷದ ಬಿ ಫಾರಂ ಸಹ ತೆಗೆದುಕೊಂಡು ಹೋಗಿದ್ದರು. ಆದರೆ ಈಗ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಫ್ಯಾಕ್ಸ್ ಮಾಡಿರುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಹಾಗೂ ಬಿಜೆಪಿಯಿಂದ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಅವರು ಸ್ಪರ್ಧಿಸುತ್ತಿದ್ದಾರೆ. ಇದೀಗ ಮತ್ತೊಬ್ಬ ಮಾಜಿ ಮುಖ್ಯಮಂತ್ರಿಯ ಸ್ಪರ್ಧೆಯಿಂದಾಗಿ ಚಿಕ್ಕಬಳ್ಳಾಪುರ ಕ್ಷೇತ್ರ ಮತ್ತಷ್ಟು ರಂಗೇರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


