ಕುಮಾರ್ ಬಂಗಾರಪ್ಪU-ಟರ್ನ್, ಕಾಂಗ್ರೆಸ್ನಲ್ಲೇ ಉಳಿಯಲು ನಿರ್ಧಾರ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬೆದರಿಕೆಯೊಡಿದ್ದ ಕುಮಾರ್ ಬಂಗಾರಪ್ಪ ಇದೀಗ U-ಟರ್ನ್ ಹೊಡಿದಿದ್ದು, ಇನ್ನು ಮುಂದೆ ಕಾಂಗ್ರೆಸ್ ಪಕ್ಷದಲ್ಲೇ ಉಳಿಯುವ ನಿರ್ಧಾರ ಪ್ರಕಟಿಸಿದ್ದಾರೆ.
ಶಿವಮೊಗ್ಗ ಪಕ್ಷದಿಂದ ಟಿಕೆಟ್ ಸಿಗದೆ ಬಂಡಾಯವಾಗಿ ಸ್ಪರ್ಧಿಸಲು ನಿರ್ಧರಿಸಿದ್ದ ಕುಮಾರ್ ಬಂಗಾರಪ್ಪರ ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿಯಾಗಿದೆ. ಹೀಗಾಗಿ ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದ್ದಿದ್ದು, ಪಕ್ಷದಲ್ಲೇ ಮುಂದುವರೆಯುವ ನಿರ್ಧಾರ ಪ್ರಟಿಸಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರ್, ಕಾಂಗ್ರೆಸ್ನಿಂದ ಸ್ಪರ್ಧಿಸಲು ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದು ನಿಜ. ಆದರೆ ಮುಂದೆ ಕಾಂಗ್ರೆಸ್ ಪಕ್ಷದಲ್ಲೇ ಉಳಿಯುತ್ತೇನೆ. ಒಂದು ಪಕ್ಷ ಕಾಂಗ್ರೆಸ್ ಅವಕಾಶ ಕೊಟ್ಟರೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ತಿಳಿಸಿದ್ದಾರೆ.
ಈ ವೇಳೆ, ಸಹೋದರ ಮಧು ಬಂಗಾರಪ್ಪ ವಿರುದ್ಧ ಹಾರಿಹಾಯ್ದ ಅವರು, ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ನಿಲ್ಲುವ ನಿರ್ಧಾರ ಕೈಗೊಂಡಿದ್ದು ನನ್ನ ತಂಗಿ ಗೀತಾ ಶಿವರಾಜ್ಕುಮಾರ್ ವಿರುದ್ಧ ನಿರ್ಧಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಧು ಬಂಗಾರಪ್ಪ ಸ್ವಾರ್ಥಕ್ಕಾಗಿ ನಾನು ಬಲಿಪಶುವಾಗಿದ್ದೇನೆ. ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಾ ಬಂದಿದ್ದಾನೆ. ಕಳೆದ 14 ವರ್ಷಗಳಿಂದ ಎಲ್ಲವನ್ನೂ ಸಹಿಸಿಕೊಂಡು ಬಂದಿದ್ದೆ ಆದರೆ ಈಗ ಅನಿವಾರ್ಯವಾಗಿ ಮಾಧ್ಯಮದ ಮುಂದೆ ಬರಬೇಕಾಗಿದೆ ಎಂದು ಕುಮಾರ್ ವಿಷಾದ ವ್ಯಕ್ತಪಡಿಸಿದರು.
ಡಾ. ರಾಜ್ಕುಮಾರ್, ಬಂಗಾರಪ್ಪ ಕುಟುಂಬದ ಗೌರವವನ್ನು ಕಾಪಾಡಬೇಕಿದೆ. ನಮ್ಮ ಮನೆತನದ ಭಾವನೆಗಳಿಗೆ ದಕ್ಕೆ ತರುವಂತ ಕೆಲಸ ಮಾಡುವುದಿಲ್ಲ ಎಂದು ಕುಮಾರ್ ಬಂಗಾರಪ್ಪ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


