ಈಗಿನ ಸುದ್ದಿ

ಮುಜಾಫರ್‌ನಗರ ಗಲಭೆಗೆ ಉ.ಪ್ರದೇಶ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಸುಪ್ರೀಂ

ಮುಜಾಫರ್‌ನಗರ ಗಲಭೆಗೆ ಉ.ಪ್ರದೇಶ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಸುಪ್ರೀಂ
Published On :

ನವದೆಹಲಿ: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ಭಾರಿ ಹಿನ್ನೆಡೆಯಾಗಿದ್ದು, ಮುಜಾಫರ್‌ನಗರ ಕೋಮುಗಲಭೆಗೆ ಸಂಬಂಧಿಸಿದಂತೆ ಬುಧವಾರ ಸುಪ್ರೀಂ ಕೋರ್ಟ್ ಅಖಿಲೇಶ್ ಯಾದವ್ ನೇತೃತ್ವದ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಮುಜಾಫರ್‌ನಗರ ಗಲಭೆಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದಿರುವ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ವಹಿಸುವ ಅಗತ್ಯ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಅಲ್ಲದೆ ಘಟನೆಯ ಕುರಿತು ಸಂಪೂರ್ಣ ವರದಿ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಡೆದ ಕೋಮುಗಲಭೆ ಕುರಿತು ಸಿಬಿಐ ಅಥವಾ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಕೋರಿ ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಸದಾಶಿವಂ ನೇತೃತ್ವದ ಸುಪ್ರೀಂ ಪೀಠ ತಿರಸ್ಕರಿಸಿದೆ.

ಗಲಭೆಯ ವೇಳೆ ಜನರ ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಆದರೆ ಇದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಇದಕ್ಕೆ ಉತ್ತರ ಪ್ರದೇಶ ಸರ್ಕಾರದ ಆರಂಭಿಕ ನಿರ್ಲಕ್ಷ್ಯವೇ ಕಾರಣ ಎಂದು ಅಭಿಪ್ರಾಯ ಪಟ್ಟಿರುವ ಕೋರ್ಟ್, ಜನರ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಸ್ಪಷ್ಟಪಡಿಸಿದೆ.

ಗಲಭೆಯನ್ನು ನಿಯಂತ್ರಿಸುವಲ್ಲಿ ವಿಫವಾಗಿರುವ ಅಧಿಕಾರಿಗಳು ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಅಲ್ಲದೆ ಗಲಭೆಯ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ 10 ಲಕ್ಷ ರುಪಾಯಿ ಪರಿಹಾರ ನೀಡುವಂತೆ ಕೋರ್ಟ್ ಸೂಚಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.