ಈಗಿನ ಸುದ್ದಿ

ಸುಬ್ರತಾ ರಾಯ್‌ಗೆ ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು

ಸುಬ್ರತಾ ರಾಯ್‌ಗೆ  ಸುಪ್ರೀಂಕೋರ್ಟ್ ಷರತ್ತು ಬದ್ಧ ಜಾಮೀನು
Published On :

ನವದೆಹಲಿ: ತನ್ನ ಹೂಡಿಕೆದಾರರಿಗೆ ಹಣ ಹಿಂದುರಿಗಿಸುವ ಭರವಸೆ ನೀಡಿರುವ ಸಹರಾ ಮುಖ್ಯಸ್ಥ ಸುಬ್ರತಾ ರಾಯ್‌ಗೆ ಸುಪ್ರೀಂಕೋರ್ಟ್ ಬುಧವಾರ ಷರತ್ತು ಬದ್ಧ ಜಾಮೀನು ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹೂಡಿಕೆದಾರರಿಗೆ ಹಂತ ಹಂತವಾಗಿ ಹಣ ಹಿಂದುರಿಗಿಸುವಂತೆ ಆದೇಶಿಸಿದ್ದು, ಇದಕ್ಕಾಗಿ ಸುಮಾರು 10.000 ಸಾವಿರ ಕೋಟಿ ರುಪಾಯಿ ಠೇವಣಿ ಹಿಡುವಂತೆ ಸಹರಾಗೆ ಸೂಚಿಸಿದೆ.

ಹೂಡಿಕೆದಾರರಿಗೆ ಹಣ ಹಿಂದುರಿಗಿಸದ ಹಿನ್ನೆಲೆಯಲ್ಲಿ ಸುಬ್ರತಾ ರಾಯ್‌ರನ್ನು ಮಾರ್ಚ್ 4 ರಂದು ಸುಪ್ರೀಂಕೋರ್ಟ್ ಪೊಲೀಸರ ವಶಕ್ಕೆ ನೀಡಿತ್ತು. ಸದ್ಯ ತಿಹಾರ್ ಜೈಲಿನಲ್ಲಿದ್ದ ಸುಬ್ರತಾ ರಾಯ್‌ಗೆ ಜಾಮೀನು ಸಿಕ್ಕಿದೆ.

ಇದಕ್ಕೂ ಮುನ್ನ ಹೂಡಿಕೆದರರಿಗೆ ಹಣ ವಾಪಸ್ ಮಾಡಲು ನನಗೆ ಕಾಲಾವಕಾಶ ನೀಡಬೇಕು ಎಂದು ಕೋರ್ಟ್‌ಗೆ ರಾಯ್ ಕೋರಿದ್ದು, ಸಹರಾ ಸಂಸ್ಥೆಯ ಆಸ್ತಿಯನ್ನು ಮಾರಾಟ ಮಾಡಿ ಹೂಡಿಕೆದಾರರಿಗೆ ಹಣ ಹಿಂದುರಿಗಿಸುವುದಾಗಿ ಸುಬ್ರತಾ ರಾಯ್ ಹೇಳಿದ್ದರು.

ಸಹರಾ ಸಂಸ್ಥೆ ತನ್ನ ಆಸ್ತಿಯನ್ನು ಮಾರಾಟ ಮಾಡಿ, ಹೂಡಿಕೆದಾರರ 22,500 ಕೋಟಿ ರುಪಾಯಿ ಬಾಕಿ ಹಣವನ್ನು ಹಿಂದುರಿಗಿಸಿವುದಾಗಿ ಮತ್ತು ನಾಳೆಯಿಂದಲೇ ಆಸ್ತಿ ಮಾರಾಟ ಪ್ರಕ್ರಿಯೆ ಆರಂಭಿಸುವುದಾಗಿ ಸುಬ್ರತ ರಾಯ್ ಕೋರ್ಟ್ಗೆ ತಿಳಿಸಿದ್ದರು.

ಈ ಬಗ್ಗೆ ಹೂಡಿಕೆದಾರರಿಗೆ ತಾವು ಬ್ಯಾಂಕ್ ಗ್ಯಾರಂಟಿ ನೀಡಲು ಯತ್ನಿಸುವುದಾಗಿ ಭರವಸೆ ನೀಡಿದ್ದರು. ಅಲ್ಲದೆ ಇದೊಂದು ಅವಕಾಶ ಕೊಡಿ, ಹಣ ಹಿಂದುರಿಗಿಸದಿದ್ದರೆ ತಾವು ಕೊಡುವ ಶಿಕ್ಷೆಯನ್ನು ಅನುಭವಿಸುವುದಾಗಿ ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.