ಲೋಕಸಮರಕ್ಕೆ ರಾಖಿ ಸಾವಂತ್...?

ಮುಂಬೈ: ಬಾಲಿವುಡ್ ನಟಿ ರಾಖಿಸಾವಂತ್ ಅವರು ಲೋಕಸಭಾ ಚುನಾವಣಾ ಕಣಕ್ಕಿಳಿಯಲಿದ್ದು, ವಾಯುವ್ಯ ಮುಂಬೈ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ರಾಖಿ ಸಾವಂತ್ ಚುನಾವಣಾ ಸ್ಪರ್ಧೆ ಕುರಿತು ಸ್ವತಃ ಅವರೇ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದು, ಯಾವ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ ಎಂಬುದನ್ನು ಮಾತ್ರ ಹೇಳಿಲ್ಲ. ಪ್ರಮುಖ ರಾಜಕೀಯ ಪಕ್ಷವೊಂದು ನನಗೆ ಟಿಕೆಟ್ ನೀಡುತ್ತಿದ್ದು, ಶೀಘ್ರದಲ್ಲಿಯೇ ಪಕ್ಷದ ಹೆಸರನ್ನು ಬಹಿರಂಗ ಪಡಿಸುತ್ತೇನೆ ಎಂದು ರಾಖಿ ಹೇಳಿದ್ದಾರೆ.
'ನನಗೆ ಯಾವುದೇ ರಾಜಕೀಯ ತಿಳಿದಿಲ್ಲ. ಸಾಮಾನ್ಯ ಪ್ರಜೆಗಳ ಸಮಸ್ಯೆಗಳನ್ನು ಬಗೆಹರಿಸುವುದೊಂದೇ ನನ್ನ ಪ್ರಮುಖ ಕರ್ತವ್ಯವಾಗಿದೆ. ನಾನು ಎಂದಿಗೂ ರಾಜಕಾರಣಿಯಾಗಲು ಬಯಸಿರಲಿಲ್ಲ. ಕಳೆದ 7 ವರ್ಷಗಳಲ್ಲಿ ನಾನು ಸಾಕಷ್ಟು ಸಮಾಜಸೇವಾ ಕಾರ್ಯಗಳನ್ನು ಮಾಡಿದ್ದೇನೆ. ನನ್ನ ಕಾರ್ಯಗಳನ್ನು ಗುರುತಿಸಿ ನನಗೆ ಟಿಕೆಟ್ ನೀಡಲಾಗುತ್ತಿದೆ. ದೇಶದ ಮಹಿಳೆಯರಿಗೆ ಭದ್ರತೆ ಒದಗಿಸುವುದೇ ನನ್ನ ಮೊದಲ ಆದ್ಯತೆಯಾಗಿರುತ್ತದೆ'.
'ಮುಂಬೈ ಅನ್ನು ನಾನು ಮತ್ತೊಂದು ದೆಹಲಿಯಾಗಿ ನೋಡಲು ಇಚ್ಛಿಸುವುದಿಲ್ಲ. ಇದಕ್ಕಾಗಿ ಮಹಿಳೆಯರಿಗೆ ಆತ್ಮರಕ್ಷಣೆ ಮತ್ತು ಕರಾಟೆ ತರಬೇತಿ ನೀಡುವ ಕುರಿತು ಚಿಂತನೆ ನಡೆಸುತ್ತಿದ್ದೇನೆ' ಎಂದು ರಾಖಿ ಸಾವಂತ್ ಹೇಳಿದರು. ಈ ಹಿಂದೆ ಕಳದ ಮಾರ್ಚ್ 1 ರಂದು ಮುಂಬೈನಲ್ಲಿ ನಟಿ ರಾಖಿ ಸಾವಂತ್ ಅವರು ಬಿಜೆಪಿ ಪಕ್ಷವನ್ನು ಸೇರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


