ಲೋಕಸಮರ: ರಾಜ್ಯದಲ್ಲಿ 51 ನಾಮಪತ್ರ ತಿರಸ್ಕೃತ

ಬೆಂಗಳೂರು: ರಾಜ್ಯದ 28 ಲೋಕಸಭಾ ಚುನಾವಣಾ ಕ್ಷೇತ್ರಗಳಿಗೆ ಸುಮಾರು 916 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಅದರಲ್ಲಿ 51 ನಾಮಪತ್ರ ತಿರಸ್ಕೃತಗೊಂಡಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿದ ಚುನಾವಣಾಧಿಕಾರಿ, ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು. ಆ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷದ ಹುರಿಯಾಳುಗಳು ನಾಮಪತ್ರ ಸಲ್ಲಿಸಿದ್ದರು. 28 ಕ್ಷೇತ್ರಗಳ ಪೈಕಿ 916 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು,. ಅದರಲ್ಲಿ 51 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದರು.
ಎಲ್ಲಾ ಜಿಲ್ಲೆಗಳ ಪೈಕಿ ಬೀದರ್‌ನಲ್ಲೇ ಒಟ್ಟು 38 ಅಭ್ಯರ್ಥಿಗಳು ಕಣದಲ್ಲಿದ್ದು,. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸದ್ಯ 552 ಅಭ್ಯರ್ಥಿಗಳು ಕಣದಲ್ಲಿದ್ದು, ನಾಮಪತ್ರ ಹಿಂಪಡೆಯಲು ನಾಳೆ ಕೊನೆಯ ದಿನವಾಗಿರುವುದರಿಂದ ಈ ಸಂಖ್ಯೆ ಇಳಿಯುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


