ಈಗಿನ ಸುದ್ದಿ

ಸೋನಿಯಾ ವಿರುದ್ಧ ಸ್ಪರ್ಧಿಸಲ್ಲ: ಉಮಾ ಭಾರತಿ

ಸೋನಿಯಾ ವಿರುದ್ಧ ಸ್ಪರ್ಧಿಸಲ್ಲ: ಉಮಾ ಭಾರತಿ
Published On :

ನವದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಬಿಜೆಪಿ ನಾಯಕಿ ಉಮಾ ಭಾರತಿ, ಝಾನ್ಸಿ ಲೋಕಸಭಾ ಕ್ಷೇತ್ರದಿಂದಲೇ ತಾವು ಚುನಾವಣೆ ಸ್ಪರ್ಧಿಸುವುದಾಗಿ ಶುಕ್ರವಾರ ಹೇಳಿದ್ದಾರೆ.

ಉಮಾ ಭಾರತಿ ಅವರಿಗೆ ಬಿಜೆಪಿ ಈಗಾಗಲೇ ಝಾನ್ಸಿ ಕ್ಷೇತ್ರದಿಂದ ಟಿಕೆಟ್ ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಳಿಸಬೇಕು ಎಂಬ ಕಾರಣಕ್ಕೆ ಉಮಾ ಭಾರತಿ ಅವರ ಕ್ಷೇತ್ರ ಬದಲಾವಣೆಗೆ ಬಿಜೆಪಿ ಮುಂದಾಗಿತ್ತು. ಅಲ್ಲದೆ ಯೋಗ ಗುರು ಬಾಬಾ ರಾಮ್ದೇವ್ ಅವರು ಸಹ ಸೋನಿಯಾ ವಿರುದ್ಧ ಉಮಾ ಭಾರತಿ ಅವರನ್ನು ಕಣಕ್ಕಿಳಿಸುವಂತೆ ಸಲಹೆ ನೀಡಿದ್ದರು.

ಪಕ್ಷದ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ. ಆದರೆ ಸ್ವಕ್ಷೇತ್ರ ಝಾನ್ಸಿಯನ್ನು ಯಾವುದೇ ಕಾರಣಕ್ಕು ತೊರೆಯುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿರುವ ಉಮಾ ಭಾರತಿ, ಬೇಕಾದರೆ ಝಾನ್ಸಿ ಮತ್ತು ರಾಯ್‌ಬರೇಲಿ ಎರಡು ಕಡೆ ಸ್ಪರ್ಧಿಸಲು ಸಿದ್ಧ ಎಂದಿದ್ದಾರೆ.

ಈ ಮಧ್ಯೆ, ಝಾನ್ಸಿಯಿಂದ ಉಮಾ ಭಾರತಿ ಅವರನ್ನು ಕಣಕ್ಕಿಳಿಸಲು ಪಕ್ಷ ನಿರ್ಧಸಿದ್ದು, ಅಮೇಠಿ ಮತ್ತು ರಾಯ್ ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳನ್ನು ಶೀಘ್ರವೇ ಘೋಷಿಸುವುದಾಗಿ ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.