ಇಮ್ರಾನ್ ಮಸೂದ್ಗೆ 14 ದಿನ ನ್ಯಾಯಂಗ ಬಂಧನ

ಸಹಾರನ್ಪುರ್: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಹಾರನ್ಪುರ್ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಇಂದು ಉತ್ತರ ಪ್ರದೇಶ ಪೊಲೀಸರು ಇಮ್ರಾನ್ ಮಸೂದ್ರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
ವಿಚಾರಣೆ ನಡೆಸಿದ ಕೋರ್ಟ್ ಮಸೂದ್ ಅವರಿಗೆ 14ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಚುನಾವಣಾ ಪ್ರಚಾರ ಸಭೆಯಲ್ಲಿ ಕ್ಯಾಮೆರಾ ಎದುರೇ ಮಸೂದ್ ಅವರು ಮೋದಿ ಅವರನ್ನು ಕೊಚ್ಚಿ ಕೊಲೆ ಮಾಡುವುದಾಗಿ ಹೇಳಿಕೆ ನೀಡಿದ್ದರು. ಮಸೂದ್ ಹೇಳಿಕೆ ವಿರುದ್ಧ ಬಿಜೆಪಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು.
ಸಹಾರನ್ಪುರದಲ್ಲಿ ಮಸೂದ್ ಹೇಳಿದ್ದು...
ನಾನೊಬ್ಬ ಅಬ್ಬೇಪಾರಿ. ಜನರಿಗಾಗಿ ನನ್ನ ಪ್ರಾಣ ನೀಡಲು, ಪ್ರಾಣ ತೆಗೆಯಲೂ ಹಿಂದೆ ಮುಂದೆ ನೋಡುವವನಲ್ಲ. ಮೋದಿ ಉತ್ತರಪ್ರದೇಶವನ್ನೂ ಗುಜರಾತ್ ಎಂದೇ ಭಾವಿಸಿದ್ದಾರೆ. ಗುಜರಾತ್ನಲ್ಲಿರೋದು ಕೇವಲ ಶೇ. 4ರಷ್ಟು ಮುಸ್ಲಿಮರು. ಆದರೆ, ಉತ್ತರಪ್ರದೇಶದಲ್ಲಿ ಶೇ.22ರಷ್ಟು ಮುಸ್ಲಿಮರಿದ್ದಾರೆ. ಮೋದಿಗೆ ತಕ್ಕ ಉತ್ತರ ಹೇಗೆ ನೀಡಬೇಕೆಂಬುದು ನನಗೆ ಚೆನ್ನಾಗಿ ಗೊತ್ತು. ನಾವು ಅವರನ್ನು ಕೊಚ್ಚಿ ಕೊಲ್ಲುತ್ತೇವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


