ಈಗಿನ ಸುದ್ದಿ

ಸಿಎಸ್‌ಕೆ ತಂಡದ ನಾಯಕ ಸ್ಥಾನ ತ್ಯಜಿಸಲು ಮುಂದಾದ ಧೋನಿ

ಸಿಎಸ್‌ಕೆ ತಂಡದ ನಾಯಕ ಸ್ಥಾನ ತ್ಯಜಿಸಲು ಮುಂದಾದ ಧೋನಿ
Published On :

ನವದೆಹಲಿ: ಇಂಡಿನ್ ಪ್ರಿಮೀಯರ್ ಲೀಗ್ ಸ್ಪಾಟ್ ಫಿಕ್ಸಿಂಗ್‌ನಲ್ಲಿ ತಮ್ಮ ಹೆಸರು ಕೇಳಿ ಬಂದಿರುವುದರಿಂದ ಬೇಸರಗೊಂಡಿರುವ ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನಾಯಕ ಸ್ಥಾನವನ್ನು ತ್ಯಜಿಸಲು ಮುಂದಾಗಿದ್ದಾರೆ.

ಸದ್ಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಐಪಿಎಲ್ ಟಿ-20 ವಿಶ್ವಕಪ್‌ನಲ್ಲಿ ಆಡುತ್ತಿರುವ ಧೋನಿ ಅವರು ಇತ್ತೀಚೆಗೆ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬೇಸತ್ತು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಸ್ಥಾನ ಹಾಗೂ ಇಂಡಿಯಾ ಸಿಮೆಂಟ್ ಉಪಾಧ್ಯಕ್ಷ ಸ್ಥಾನಕ್ಕೂ ರಾಜಿನಾಮೆ ನೀಡಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕರು ಆಗಿರುವ ಶ್ರೀನಿವಾಸನ್ ಅಳಿಯ ಮೇಯಪ್ಪನ್ ಹಾಗೂ ಧೋನಿ ಪರಮಾಪ್ತರು. ಹೀಗಾಗಿ ಇಂಡಿಯಾ ಸಿಮೆಂಟ್‌ನಲ್ಲಿ ಧೋನಿ ಬಂಡವಾಳ ಹೂಡಿಕೆ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಇತ್ತೀಚೆಗೆ ಸುಪ್ರೀಂಕೋರ್ಟ್ ಮುದಗಲ್ ವರದಿಯ ವಿಚಾರಣೆ ನಡೆಸುವ ವೇಳೆ ಧೋನಿ ನಡವಳಿಕೆಗಳ ಬಗ್ಗೆ ಸಂಶಯ ವ್ಯಕ್ತಪಡಿಸಿತ್ತು. ಅಲ್ಲದೆ ಇಂಡಿಯಾ ಸಿಮೆಂಟ್ಸ್ ಜತೆ ಯಾವುದೇ ರೀತಿಯ ಸಂಬಂಧ ಇಟ್ಟುಕೊಳ್ಳಬಾರದೆಂದು ಸೂಚಿಸಿತ್ತು. ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತು ನಾಯಕ ಸ್ಥಾನ ತ್ಯಜಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸ್ಪಾಟ್ ಫಿಕ್ಸಿಂಗ್ ಹಗರದಲ್ಲಿ ಭಾಗಿಯಾಗಿರುವ ಆರೋಪದಡಿ ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್  7ನೇ ಆವೃತ್ತಿಯ ಐಪಿಎಲ್‌ನಲ್ಲಿ ಭಾಗವಹಿಸದಂತೆ ನಿಬಂರ್ಧ ವಿದಿಸಿತ್ತು. ನಂತರ ಬಿಸಿಸಿಐ ಪರ ವಾದ ಮಂಡಿಸಿದ್ದ ವಕೀಲರು, ತಪ್ಪು ಮಾಡಿರುವ ತಂಡದ ಮಾಲೀಕರು ಹಾಗೂ ಆಟಗಾರರಿಗೆ ಶಿಕ್ಷೆಯಾಗಲಿ. ಹೀಗಾಗಿ ತಂಡಗಳು ಭಾಗವಹಿಸದಂತೆ ನಿಬಂಧ ವಿದಿಸುವುದು ಸರಿಯಲ್ಲ ಎಂದು ವಾದಿಸಿದ್ದರು.

ಇದೇ ವೇಳೆ, ಬಿಸಿಸಿಐ ಅಧ್ಯಕ್ಷ ಸ್ಥಾನ ತೊರೆಯುವಂತೆ ಶ್ರೀನಿವಾಸನ್‌ಗೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಮುಂದೆ ತೆರವುಗೊಳ್ಳುವ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಅವರನ್ನು ನೇಮಿಸುವಂತೆ ಸೂಚಿಸಿತ್ತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.