ಈಗಿನ ಸುದ್ದಿ

ಕಾಂಗ್ರೆಸ್ ಎರಡಂಕಿ ಕೂಡ ದಾಟುವುದಿಲ್ಲ: ನಮೋ

ಕಾಂಗ್ರೆಸ್ ಎರಡಂಕಿ ಕೂಡ ದಾಟುವುದಿಲ್ಲ: ನಮೋ
Published On :

ಇಟಾನಗರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಟ ಎರಡಂಕಿ ಕೂಡ ದಾಟುವುದಿಲ್ಲ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹೇಳಿದ್ದಾರೆ.

ಅಸ್ಸಾಂನ ಇಟಾನಗರದಲ್ಲಿ ನಡೆದ ಬಿಜೆಪಿ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಂಡ ನರೇಂದ್ರ ಮೋದಿ ಅವರು, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. 'ಕಳೆದ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಾಧಿಸಿದ್ದೇನು ಇಲ್ಲ. ಹಗರಣಗಳನ್ನು ಮೈಮೇಲೆ ಎಳೆದುಕೊಂಡು ಅವುಗಳನ್ನು ಮುಚ್ಚಿಹಾಕುವದರಲ್ಲೇ ಕಾಂಗ್ರೆಸ್ ಕಾಲಹರಣ ಮಾಡಿದೆ. ದೇಶದ ಜನತೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಾಲಿಸುವ ಸಮಯ ಬಂದಿದೆ'.

'ಅಸ್ಸಾಂ ಮುಖ್ಯಮಂತ್ರಿ ತರುಣ್ ಗಗೋಯ್ ಅವರು ಸುಮಾರು 10 ಬಾರಿ ದೆಹಲಿಗೆ ಆಗಮಿಸಿ, ಮೇಡಂ(ಸೋನಿಯಾ ಗಾಂಧಿ)ರನ್ನು ಭೇಟಿ ಮಾಡಿದ್ದಾರೆ. ಆದರೆ ಅವರಿಗೆ ತಮ್ಮ ರಾಜ್ಯದ ಜನತೆಯನ್ನು ಭೇಟಿ ಮಾಡಿ ಸಮಸ್ಯೆ ಆಲಿಸಲು ಸಮಯ ದೊರೆಯುತ್ತಿಲ್ಲ. ಗಡಿಯಲ್ಲಿ ಎರಡು ರಾಜ್ಯಗಳ ಜನತೆ ಬಡಿದಾಡಿಕೊಂಡು ಸಾಯುತ್ತಿದ್ದಾರೆ. ಅಲ್ಲಿಗೆ ಹೋಗಿ ಸಮಸ್ಯೆ ಏನೆಂದು ಆಲಿಸಲು ಇವರಿಗೆ ಪುರುಸೋತ್ತಿಲ್ಲ. ಯಾವುದೇ ಕಾಂಗ್ರೆಸ್ ಮುಖಂಡ ಜನರ ಬಳಿಗೆ ಹೋಗಿ ಸಮಸ್ಯೆ ಕೇಳಿಲ್ಲ' ಎಂದು ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇದಕ್ಕೂ ಮೊದಲು ಇಟಾನಗರದಲ್ಲಿ ನಡೆದ ರ್ಯಾಲಿಯಲ್ಲಿ ಪಾಲ್ಗೊಂಡ ನರೇಂದ್ರ ಮೋದಿ ಅವರು, ಭಾರತೀಯ ಮೀನುಗಾರರ ಹತ್ಯೆ ಮತ್ತು ಅರುಣಾಚಲ ಪ್ರದೇಶದ ಸಚಿವನ ಪುತ್ರನ ಸಾವಿನ ಪ್ರಕರಣದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಗಡಿ ಭಾಗದ ರಾಜ್ಯಗಳೆಂದರೆ ಯಾವಾಗಲೂ ಒಂದು ರೀತಿ ತಾತ್ಸಾರ. ಈ ರಾಜ್ಯಗಳ ವಿಚಾರ ಬಂದಾಗಲೆಲ್ಲಾ ಕಾಂಗ್ರೆಸ್ ಮಲತಾಯಿ ಧೋರಣೆ ಅನುಸರಿಸುತ್ತದೆ ಎಂದು ಕಿಡಿಕಾರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.