ಪ್ರಧಾನಿ ಕುರ್ಚಿಯೇ ಬಿಜೆಪಿ ಗುರಿ: ಸೋನಿಯಾ ಗಾಂಧಿ

ಮೆವತ್: ಪ್ರಧಾನಿ ಕುರ್ಚಿಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಪಕ್ಷ ದೇಶದ ಜನರನ್ನು ಹಾದಿ ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಹರ್ಯಾಣದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಅವರು, ಬಿಜೆಪಿ ಪ್ರಧಾನಿ ಅಭ್ಯರ್ಥಿ ಮತ್ತು ಬಿಜೆಪಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ನಾಯಕರಿಗೆ ಪ್ರಧಾನಿ ಕುರ್ಚಿಯನ್ನು ಸೆಳೆಯುವುದೇ ಪ್ರಮುಖವಾಗಿದ್ದು, ಇದಕ್ಕಾಗಿ ಅವರು ದೇಶದ ಜನರ ಹಾದಿ ತಪ್ಪಿಸುತ್ತಿದ್ದಾರೆ. ಜನರ ಮುಂದೆ ಮೊಸಳೆ ಕಣ್ಣೀರು ಹಾಕುವ ಮೂಲಕ ಜನರ ಗಮನವನ್ನು ತಮ್ಮತ್ತ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದರು.
ಬಿಜೆಪಿ ತನ್ನ ಅಂಧಕಾರ್ಯಗಳನ್ನು ಮರೆ ಮಾಚಲು ಯತ್ನಿಸುತ್ತಿದ್ದು, ಇದಕ್ಕಾಗಿ ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದೆ. ಆದರೆ ಬಿಜೆಪಿ ಪಕ್ಷದ ಯಾವುದೇ ಕುತಂತ್ರಗಳಿಗೂ ಕಾಂಗ್ರೆಸ್ ಪಕ್ಷ ಬಗ್ಗುವುದಿಲ್ಲ. ಕಾಂಗ್ರೆಸ್ನ ಇತಿಹಾಸ ಮತ್ತು ನಾವು ಮಾಡಿದ ಅಭಿವೃದ್ಧಿ ಕಾರ್ಯಗಳು ನಿಮ್ಮ ಮುಂದಿದೆ. ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ಕಳೆದ 10 ವರ್ಷಗಳಿಂದ ನಡೆದಷ್ಟು ಅಭಿವೃದ್ಧಿ ಕಾರ್ಯಗಳು ಯಾವುದೇ ಇತರೆ ಪಕ್ಷಗಳ ಸರ್ಕಾರದಿಂದ ನಡೆದಿಲ್ಲ.
ದೇಶದ ರೈತರ ಅಭಿವೃದ್ಧಿಗೆ ಕಾಂಗ್ರೆಸ್ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಭೂಮಿ ಇಲ್ಲದೆ ರೈತರು ಮತ್ತು ಭೂಮಿ ಕಳೆದುಕೊಂಡ ಜನರಿಗೆ ಭೂಮಿ ಮತ್ತು ವಾಸಿಸಲು ಮನೆ ನೀಡುತ್ತೇವೆ. ದೇಶದ ಜನರಿಗೆ ಕಾಂಗ್ರೆಸ್ ಪಕ್ಷ ಏನೆಂದು ತಿಳಿದಿದ್ದು, ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸೋನಿಯಾ ಗಾಂಧಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


