ಭುಲ್ಲರ್ನನ್ನು ಗಲ್ಲಿಗೇರಿಸುವಂತಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ದೆಹಲಿ ಬಾಂಬ್ ಸ್ಪೋಟ ಪ್ರಕರಣದಲ್ಲಿ ಅಪರಾಧಿಯಾಗಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ದೇವಿಂದರ್ ಪಾಲ್ ಸಿಂಗ್ನನ್ನು ಗಲ್ಲಿಗೇರಿಸಬಾರದು ಎಂದು ಸೋಮವಾರ ಸುಪ್ರೀಂಕೋರ್ಟ್ ಹೇಳಿದೆ.
1993ರ ದೆಹಲಿ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ದೇವಿಂದರ್ ಪಾಲ್ ಸಿಂಗ್ ಮಾನಸಿಕ ಆರೋಗ್ಯ ಸರಿಇಲ್ಲದಿರುವ ಕಾರಣ ಆತನಿಗೆ ಗಲ್ಲು ಶಿಕ್ಷೆ ಪ್ರದಾನ ಮಾಡಬಾರದು ಎಂದು ಕುಟುಂಬಸ್ಥರು ನ್ಯಾಯಾಲಯದಲ್ಲಿ ಮನವಿ ಮಾಡಿರುವ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ಭುಲ್ಲರ್ ಗಲ್ಲು ಶಿಕ್ಷೆಗೆ ತಡೆ ನೀಡಿದೆ.
1993ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ಅಂತಿಮ ತೀರ್ಪು 2001ರಲ್ಲಿ ಪೂರ್ಣಗೊಂಡಿತ್ತು. ಅಲ್ಲದೆ ಪ್ರಕರಣದಲ್ಲಿ ದೇವಿಂದರ್ ಪಾಲ್ ಸಿಂಗ್ ಅಪರಾಧಿ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಅಲ್ಲದೆ ಆತನಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. 2003ರಲ್ಲಿ ಭುಲ್ಲರ್ನ ಸಂಬಂಧಿಕರು ಗಲ್ಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ರಾಷ್ಟ್ರಪತಿಗಳ ಬಳಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದರು. ಆದರೆ ರಾಷ್ಟ್ರಪತಿಗಳು ಭುಲ್ಲರ್ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು.
ಭುಲರ್ ಮಾನಸಿಕ ಆರೋಗ್ಯ ಹದಗೆಟ್ಟಿರುವುದರಿಂದ ಆತನ ಶಿಕ್ಷೆಯನ್ನು ತಡೆಹಿಡಿಯಬೇಕು ಎಂದು ಭುಲ್ಲರ್ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದು, ಇದೀಗ ಭುಲ್ಲರ್ ಗಲ್ಲು ಶಿಕ್ಷೆಗೆ ನ್ಯಾಯಾಲಯ ತಡೆ ನೀಡಿದೆ.
ಕಳೆದ ಜನವರಿಯಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 15 ಮಂದಿ ಅಪರಾಧಿಗಳ ಶಿಕ್ಷೆಯನ್ನು ಕಡಿತಗೊಳಿಸಿ ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಿತ್ತು. ಅಲ್ಲದೆ ಶಿಕ್ಷೆ ಪ್ರಧಾನ ವಿಳಂಬವನ್ನು ಅಮಾನವೀಯ ಎಂದು ಹೇಳಿತ್ತು. ಅಂತೆಯೇ ಮಾನಸಿಕ ಸ್ತೀಮಿತ ಕಳೆದುಕೊಂಡ ಅಥವಾ ಮಾನಸಿಕ ಖಾಯಿಲೆಯಿಂದ ಬಳಲುತ್ತಿರುವ ಅಪರಾಧಿಗಳ ಶಿಕ್ಷೆಯನ್ನು ಬದಲಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


