ಮೋದಿ ಪ್ರಧಾನಿಯಾದರೆ ಆಮೂಲಾಗ್ರ ಬದಲಾವಣೆ: ಅಡ್ವಾಣಿ

ಅಹ್ಮದ್ನಗರ: ನರೇಂದ್ರ ಮೋದಿ ಪ್ರಧಾನಿಯಾದರೆ ದೇಶದಲ್ಲಿ ಆಮೂಲಾಗ್ರ ಬದಲಾವಣೆಗಳಾಗುತ್ತವೆ ಎಂದು ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರು ಹೇಳಿದ್ದಾರೆ.
ಮಹಾರಾಷ್ಟ್ರದ ಅಹ್ಮದ್ನಗರದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಡ್ವಾಣಿ ಅವರು ತಮ್ಮ ಪಕ್ಷದ ಅಭ್ಯರ್ಥಿ ದಿಲೀಪ್ ಗಾಂಧಿ ಅವರ ಪರವಾಗಿ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅಡ್ವಾಣಿ, ದಿಲೀಪ್ ಗಾಂಧಿ ಅವರಿಗೆ ನೀವು ಮತ ನೀಡಿದರೆ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿ ದಾಖಲೆ ಬರೆಯುತ್ತಾರೆ. ಅಂತೆಯೇ ಅವರ ಈ ಗೆಲುವಿನೊಂದಿಗೆ ದೇಶದ ರಾಜಕೀಯ ಇತಿಹಾಸದಲ್ಲಿಯೂ ಕೂಡ ಮತ್ತೊಂದು ದಾಖಲೆ ನಿರ್ಮಾಣವಾಗಲಿದೆ. ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದರೆ ನೀವು ನಿರೀಕ್ಷಿಸಿದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.
ನರೇಂದ್ರ ಮೋದಿ ಅವರನ್ನು ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದಾಗಿನಿಂದಲೂ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಕಾಣಿಸಿಕೊಳ್ಳದ ಅಡ್ವಾಣಿ ಅವರು, ಮೋದಿ ವಿರುದ್ಧದ ತಮ್ಮ ಅಭಿಪ್ರಾಯವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದರು. ಇದೇ ಕಾರಣದಿಂದಾಗಿಯೇ ಅವರು ಗುಜರಾತ್ನ ಗಾಂಧಿ ನಗರ ಕ್ಷೇತ್ರವನ್ನು ಬದಲಿಸಲು ಮುಂದಾಗಿದ್ದರು. ಅಲ್ಲದೆ ಅಡ್ವಾಣಿ ಅವರ ಆಪ್ತರೆಂದೇ ಹೇಳಲಾಗುತ್ತಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ವಾಣ್ ಅವರ ಮಧ್ಯ ಪ್ರದೇಶದ ಭೋಪಾಲ್ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛೆ ವ್ಯಕ್ತಪಡಿಸಿದ್ದರು ಎನ್ನುವುದು ಮತ್ತೊಂದು ವಾದ.
ಆದರೆ ಇದೀಗ ಅಹ್ಮದ್ನಗರದಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಅಪರೂಪಕ್ಕೆ ಎಂಬಂತೆ ನರೇಂದ್ರ ಮೋದಿ ಅವರ ಪರ ಅಡ್ವಾಣಿ ಬ್ಯಾಟಿಂಗ್ ಮಾಡಿರುವುದು ರಾಜಕೀಯ ವಿರೋಧಿಗಳಿಗೇ ಅಚ್ಚರಿಯನ್ನುಂಟು ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


