ಈಗಿನ ಸುದ್ದಿ

ಚೆನ್ನೈ ಸ್ಫೋಟ: ಇಬ್ಬರು ಶಂಕಿತ ಉಗ್ರರ ಬಂಧನ

ಚೆನ್ನೈ ಸ್ಫೋಟ: ಇಬ್ಬರು ಶಂಕಿತ ಉಗ್ರರ ಬಂಧನ
Published On :

ಚೆನ್ನೈ, ಬೆಂಗಳೂರು: ನಿನ್ನೆ ಚೆನ್ನೈನ ರೆಲ್ವೇ ನಿಲ್ದಾಣದಲ್ಲಿ ರೈಲಿನಲ್ಲಿ ಸಂಭವಿಸಿದ ಅವಳಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಇಬ್ಬರು ಶಂಕಿತ ಉಗ್ರರನ್ನು ಚೆನ್ನೈ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಚೆನ್ನೈನ ಮನ್ನಡಿ ಬ್ರಾಡ್‌ವೇ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರು ಶಂಕಿತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳ ಬೆಂಗಳೂರು ಸಂಪರ್ಕದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಚೆನ್ನೈನ ಸಿಬಿ ಹಾಗೂ ಸಿಐಡಿ ಪೊಲೀಸರು ತಂಡ ಬೆಂಗಳೂರಿಗೆ ಆಗಮಿಸಿದ್ದು, ರೇಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದೆ.

ಇನ್ನು ಬಂಧಿತ ಆರೋಪಿಗಳು ಉಗ್ರ ಝಾಹೀರ್ ಹುಸೇನ್‌ನೊಂದಿಗೆ ಸಂಪರ್ಕ ಹೊಂದಿರುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಈ ಮಧ್ಯೆ ಬೆಂಗಳೂರು ಪೊಲೀಸರು ಸಹ ಇಂದು ಬೆಳಗ್ಗೆ ಚೆನ್ನೈಗೆ ತೆರಳಿದ್ದು, ಘಟನಾ ಸ್ಥಳವನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೆ ಸ್ಫೋಟ ಸಂಭವಿಸಿದ ಎಸ್.4 ಮತ್ತು ಎಸ್.5 ಬೋಗಿಯಲ್ಲಿ ಪ್ರಯಾಣಿಸಿದ 72 ಮಂದಿಯ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಆಂಧ್ರಪ್ರದೇಶದ ರ್ಯಾಲಿಯನ್ನು ಗುರಿಯಾಗಿಸಿಕೊಂಡು ಉಗ್ರರು ನಿನ್ನೆ ಬೆಂಗಳೂರು ಗುವಾಹಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಅವಳಿ ಬಾಂಬ್ ಸ್ಫೋಟಿಸಿದ್ದರು. ಘಟನೆಯಲ್ಲಿ ಬೆಂಗಳೂರಿನ ಟಿಸಿಎಸ್ ಕಂಪನಿಯ ಉದ್ಯೋಗಿ ಆಂಧ್ರದ ಸ್ವಾತಿ(22) ಎಂಬುವವರು ಮೃತಪಟ್ಟಿದ್ದರು. ಅಲ್ಲದೆ ಸ್ಫೋಟದಲ್ಲಿ 14 ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.