2ಜಿ ಹಗರಣ: ರಾಜಾ, ಕನ್ನಿಮೋಳಿಗೆ ಸಮನ್ಸ್ ಜಾರಿ

ನವದೆಹಲಿ: ಬಹುಕೋಟಿ 2ಜಿ ತರಂಗಾಂತರ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಟೆಲಿಕಾಂ ಸಚಿವ ಎ.ರಾಜಾ ಮತ್ತು ಕರುಣಾನಿಧಿ ಪುತ್ರಿ ಕನ್ನಿಮೋಳಿ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ವಿಚಾರಣೆಗಾಗಿ ಮೇ26ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಎ.ರಾಜಾ ಮತ್ತ ಕನ್ನಿಮೋಳಿ ಸೇರಿದಂತೆ ಪ್ರಕರಣದ 19 ಆರೋಪಿಗಳಿಗೆ ದೆಹಲಿಯ ಪಾಟಿಯಾಲ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ಈ ಹಿಂದೆ ನಡೆದಿದ್ದ ವಿಚಾರಣೆಯಲ್ಲಿ ಮಾಜಿ ಟೆಲಿಕಾಂ ಸಚಿವ ಎ.ರಾಜಾ, ಕನ್ನಿಮೋಳಿ ಮತ್ತು ಕರುಣಾನಿಧಿ ಪತ್ನಿ ದಯಾಳು ಅಮ್ಮನ್ ವಿರುದ್ಧ ಜಾರಿ ನಿರ್ದೇಶನಾಲಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿತ್ತು. ಆರೋಪ ಪಟ್ಟಿಯಲ್ಲಿ ಕರುಣಾನಿಧಿ ಪತ್ನಿ ದಯಾಳು ಅಮ್ಮನ್ ಅವರ ಹೆಸರೂ ಉಲ್ಲೇಖವಾಗಿರುವುದು ವಿಶೇಷವಾಗಿತ್ತು. ಡಿಎಂಕೆ ಕುಟುಂಬದ ಒಡೆತನವಿರುವ ಕಲೈನರ್ ವಾಹಿನಿಗೆ ಸ್ವಾನ್ ಟೆಲಿಕಾಂ ಸಂಸ್ಥೆ 200 ಕೋಟಿ ರುಪಾಯಿ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


