ಈಗಿನ ಸುದ್ದಿ

ಗವರ್ನರ್ V/s ಸಿಎಂ

ಗವರ್ನರ್ V/s ಸಿಎಂ
Published On :

ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಮತ್ತೆ ಗರಂ ಆಗಿರುವ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು, ರಾಜ್ಯ ಸರ್ಕಾರ ಬರ ಪರಿಹಾರದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದಿದ್ದಾರೆ. ಆದರೆ ರಾಜ್ಯಪಾಲರ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬರ ಪರಿಹಾರ ಸರ್ಮಕವಾಗಿ ನಡೆಯುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯಪಾಲರು, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಬರ ಪರಿಹಾರದಲ್ಲಿ ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಆದ್ಯತೆ ಮೇಲೆ ಕೆಲಸ ಮಾಡುವಂತೆ ಸಿಎಂಗೆ ಸೂಚಿಸಿದ್ದೇನೆ ಮತ್ತು ಎಲ್ಲದಕ್ಕೂ ನೀತಿ ಸಂಹಿತೆ ನೆಪ ಹೇಳುವುದು ಸರಿಯಲ್ಲ ಎಂದಿದ್ದಾರೆ.

ಬಸವ ಜಯಂತಿ ಹಿನ್ನೆಲೆಯಲ್ಲಿ ಇಂದು ಚಾಲುಕ್ಯ ಸರ್ಕಲ್ ಬಳಿ ಇರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಿಎಂ, ಬರ ಪರಿಹಾರ ಕಾರ್ಯ ಸಮರ್ಪಕವಾಗಿ ನಡೆಯುತ್ತಿದೆ. ಕುಡಿಯುವ ನೀರಿಗಾಗಿ 500 ಕೋಟಿ ಬಿಡುಗಡೆ ಮಾಡಲಾಗಿದೆ. ಅಲ್ಲದೆ ಹೆಚ್ಚುವರಿಯಾಗಿ ಮತ್ತೆ 100 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರಿಗೆ ಹೆಚ್ಚು ಆದ್ಯತೆ ನೀಡಲಾಗಿದ್ದು, ನೀರಿಗೆ ತೊಂದರೆಯಾದರೆ ಕೂಡಲೇ ಕೊಳೆವೆ ಬಾವಿ ಕೊರೆಸಿ, ಇಲ್ಲದಿದ್ದರೆ ಟ್ಯಾಂಕರ್ ಮೂಲಕ ನೀರು ಪುರೈಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.