ಈಗಿನ ಸುದ್ದಿ

ಆಫ್ಘಾನಿಸ್ತಾನದಲ್ಲಿ ಭೂಕುಸಿತ: 2000ಕ್ಕೂ ಅಧಿಕ ಸಾವು!

ಆಫ್ಘಾನಿಸ್ತಾನದಲ್ಲಿ ಭೂಕುಸಿತ: 2000ಕ್ಕೂ ಅಧಿಕ ಸಾವು!
Published On :

ಕಾಬುಲ್: ಆಫ್ಘಾನಿಸ್ತಾನದಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿರಬಹುದು ಎಂದು ಹೇಳಲಾಗುತ್ತಿದೆ.

ಕಳೆದ ಶುಕ್ರವಾರ ಸಂಭವಿಸಿದ್ದ ಪ್ರವಾಹ ಮತ್ತು ಭೂಕುಸಿತ ಅವಘಡದಲ್ಲಿ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗುತ್ತಿದೆ. ಆಫ್ಘಾನಿಸ್ತಾನದಾದ್ಯಂತ ಕಳೆದ ಒಂದು ವಾರದಿಂದ ಸತತವಾಗಿ ಸುರಿದಿದ್ದ ಮಳೆಯಿಂದಾಗಿ ಉತ್ತರ ಆಫ್ಘಾನಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಸುಮಾರು 150 ಕ್ಕೂ ಅಧಿಕ ಹಳ್ಳಿಗಳು ಜಲಾವೃತಗೊಂಡಿದ್ದವು. ಅಲ್ಲದೆ 180 ಮಂದಿಯ ಮೃತದೇಹಗಳು ಪತ್ತೆಯಾಗಿದ್ದವು.

ಆದರೆ ಪ್ರಸ್ತುತ ಅಧಿಕಾರಿಗಳು ಮತ್ತು ನೈಸರ್ಗಿಕ ವಿಕೋಪ ತಜ್ಞರು ವಿಶ್ಲೇಷಿಸುತ್ತಿರುವಂತೆ ಇದೊಂದು ದೊಡ್ಡ ನೈಸರ್ಗಿಕ ವಿಕೋಪವಾಗಿದೆ. ಈ ಹಿಂದೆ ಪ್ರವಾಹ ಮತ್ತು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ 2 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿರಬಹುದು ಎಂದು ಶಂಕಿಸಲಾಗುತ್ತಿದೆ. ಪ್ರವಾಹದಿಂದಾಗಿ ಉತ್ತರ ಆಫ್ಘಾನಿಸ್ತಾನದ ಕೆಲ ಭೂಪ್ರದೇಶಗಳು ತೇವಾಂಶದಿಂದಾಗಿ ಕುಸಿತಗೊಂಡಿವೆ. ಹೀಗಾಗಿಯೇ ದುರ್ಘಟನೆಯಲ್ಲಿ ಸಾವಿಗೀಡಾದವರ ಸಂಖ್ಯೆ ಊಹೆಗೂ ನಿಲುಕದಂತಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.

ಆದರೆ ತಜ್ಞರ ವಿಶ್ಲೇಷಣೆಯನ್ನು ಆಫ್ಘಾನಿಸ್ತಾನ ಸರ್ಕಾರ ಅಲ್ಲಗಳೆದಿದೆ. ಪ್ರಸ್ತುತ ಅಧಿಕೃತ ಮಾಹಿತಿಗಳ ಪ್ರಕಾರ ನೈಸರ್ಗಿಕ ವಿಕೋಪದಲ್ಲಿ 350 ಮಂದಿ ಸಾವಿಗೀಡಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.