ಈಗಿನ ಸುದ್ದಿ

ಅಸ್ಸಾಂ ಉಗ್ರರ ದಾಳಿ: ಸಾವಿನ ಸಂಖ್ಯೆ 32ಕ್ಕೆ ಏರಿಕೆ

ಅಸ್ಸಾಂ ಉಗ್ರರ ದಾಳಿ: ಸಾವಿನ ಸಂಖ್ಯೆ 32ಕ್ಕೆ ಏರಿಕೆ
Published On :

ಗುವಾಹಟಿ: ಅಸ್ಸಾಂನಲ್ಲಿ ಶಸ್ತ್ರಸಜ್ಜಿತ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದ್ದು, ಶನಿವಾರ 9 ಮಂದಿಯ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಿನ್ನೆ ಅಸ್ಸಾಂನ ಬೋಡೋಲ್ಯಾಂಡ್ ಪ್ರಾಂತೀಯ ಆಡಳಿತ ಪ್ರದೇಶದ ಎರಡು ಜಿಲ್ಲೆಗಳಲ್ಲಿ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇಂದು ಬೆಳಗ್ಗೆ ಬಕ್ಸಾ ಜಿಲ್ಲೆಯಲ್ಲಿ  ನಾಲ್ಕು ಮಕ್ಕಳು ಸೇರಿದಂತೆ 9 ಮೃತ ದೇಹಗಳು ಪತ್ತೆಯಾಗಿದ್ದು, ಈ ಪೈಕಿ ಇಬ್ಬರು ಮಕ್ಕಳನ್ನು ಇಲ್ನಾ ಖತುನ್ ಮತ್ತು ಅರಿಫುಲ್ ಇಸ್ಲಾಂ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ರಾತ್ರಿಯವರೆಗೆ ಮಕ್ಕಳು ಮತ್ತು ಮಹಿಳೆ ಸೇರಿದಂತೆ 23 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ದಾಳಿಯ ಹಿಂದೆ ನ್ಯಾಷನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೋಡೋಲ್ಯಾಂಡ್(ಎನ್‌ಡಿಎಫ್‌ಬಿ) ಸಂಘಟನೆಯ ಕೈವಾಡ ಇದೆ ಎನ್ನಲಾಗಿದೆ. ಆದರೆ ದಾಳಿಯ ಹಿಂದೆ ತನ್ನ ಕೈವಾಡ ಇಲ್ಲ ಎಂದು ಎನ್‌ಡಿಎಫ್‌ಬಿ ಹೇಳಿಕೊಂಡಿದೆ.

ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕೊಕ್ರಜಾರ್, ಬಕ್ಸಾ ಮತ್ತು ಚಿರಾಂಗ್ ಜಿಲ್ಲೆಗಳಲ್ಲಿ ಅನಿರ್ಧಿಷ್ಟಾವಧಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಘಟನೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಎನ್‌ಡಿಎಫ್‌ಬಿ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭದ್ರತಾ ಪಡೆಗಳಿಗೆ ಆದೇಶಿಸಿದೆ. ಪರಿಸ್ಥಿತಿ ನಿಭಾಯಿಸಲು ಘಟನಾ ಸ್ಥಳಕ್ಕೆ ಸೇನೆಯನ್ನು ಕರೆಯಿಸಲಾಗಿದೆ. ಅಲ್ಲದೆ ಶಾಂತಿ ಕಾಪಾಡುವಂತೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಕರೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.