ಅಸ್ಸಾಂ ಗಲಭೆ: ಮೃತರ ಸಂಬಂಧಿಕರಿಂದ ಪ್ರತಿಭಟನೆ

ನವದೆಹಲಿ: ಅಸ್ಸಾಂನಲ್ಲಿ ನಡೆದ ಹಿಂಸಾಚಾರದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ತರುಣ್ ಗಗೋಯ್ ಅವರು ಕೂಡಲೇ ಸ್ಥಳಕ್ಕಾಗಮಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಹಿಂಸಾಚಾರದಲ್ಲಿ ಮೃತಪಟ್ಟವರ ಅಂತ್ಯಸಂಸ್ಕಾರ ನಡೆಸಲು ಶವಗಳನ್ನು ನೀಡಬೇಕು ಎಂದು ಸಂಬಂಧಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ತರುಣ್ ಗಗೋಯ್ ಅವರು ಕೂಡಲೇ ಸ್ಥಳಕ್ಕಾಗಮಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪ್ರತಿಭಟನಾಕಾರರಿಗೆ ಧಮ್ಕಿ ಹಾಕಿದ ಗ್ರಾಮ ಪಂಚಾಯಿತಿ
ಇದೇ ವೇಳೆ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಹಿಂಪಡೆಯದಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುವುದು ಎಂದು ಸ್ಥಳೀಯ ಗ್ರಾಮ ಪಂಚಾಯಿತಿ ಎಚ್ಚರಿಸಿದೆ. ಗ್ರಾಮ ಪಂಚಾಯಿತಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸುತ್ತಿರುವ ಸಂಬಂಧಿಕರು ತಮ್ಮ ಪ್ರಾಣಕ್ಕೆ ಬೆಲೆಯೇ ಇಲ್ಲವೆ ಎಂದು ಪ್ರಶ್ನಿಸಿದ್ದಾರೆ. ನಾವು ಯಾರ ಮೇಲೆಯೂ ದಾಳಿ ಮಾಡುತ್ತಿಲ್ಲ. ಭವಿಷ್ಯದಲ್ಲಿ ಮತ್ತೆ ಇಂತಹ ಘಟನೆಗಳು ಸಂಭವಿಸದಿರಲಿ ಎಂಬ ಒಂದೇ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.
ಅಲ್ಲದೆ ಮುಖ್ಯಮಂತ್ರಿ ತರುಣ್ ಗಗೋಯ್ ಅವರು ಸ್ಥಳಕ್ಕಾಗಮಿಸದ ಹೊರತು ತಾವು ಪ್ರತಿಭಟನೆಯನ್ನು ಕೈಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಕೊಕ್ರಝಾರ್ನಲ್ಲಿ ಎನ್ಡಿಎಫ್ಬಿ ಉಗ್ರರು ನಡೆಸಿದ ದಾಳಿಯಲ್ಲಿ ಸಮುದಾಯದ 30 ಜನರ ಸಾವನ್ನಪ್ಪಿದ್ದರು. ಸುಮಾರು 20ರಿಂದ 25 ಮಂದಿ ಶಸ್ತ್ರಸಜ್ಜಿತ ಉಗ್ರರು ಮೂರು ಕುಟುಂಬಗಳ ಮೇಲೆ ಮನಸೋ ಇಚ್ಚೆ ಗುಂಡಿನ ಮಳೆಗರೆದಿದ್ದರು. ಘಟನೆಯಲ್ಲಿ ಮೂವರ ಮಕ್ಕಳು ಸೇರಿದಂತೆ 32 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದರು. ಘಟನಾ ಸ್ಥಳದಲ್ಲಿ ನಿಷೇಧಾಜ್ಞೆ ಮುಂದುವರೆಸಲಾಗಿದ್ದು, ದಾಳಿಕೋರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಸ್ಸಾಂ ಸರ್ಕಾರ ತಿಳಿಸಿದೆ.
ನಿನ್ನೆಯಷ್ಟೇ ಉಗ್ರರಿಗೆ ಸಹಕರಿಸಿದ 22 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಭದ್ರತಾ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಬಂಧಿತ ಎಲ್ಲ ಪ್ರಜೆಗಳು ಅಕ್ರಮವಾಗಿ ಭಾರತಕ್ಕೆ ಬಂದವರಾಗಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


