ಉಜ್ಜೈನಿ ಪಟಾಕಿ ಕಾರ್ಖಾನೆ ದುರಂತ: ಸಾವಿನ ಸಂಖ್ಯೆ 17ಕ್ಕೇರಿಕೆ
ಉಜ್ಜೈನಿ: ಉಜ್ಜೈನಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 17ಕ್ಕೇರಿದೆ.
ನಿನ್ನೆ ಉಜ್ಜೈನಿಯ ಬದ್ನಾಗರ್‌ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ ಪ್ರಕರಣದಲ್ಲಿ ಇಂದು ಮತ್ತೆ 2 ಶವವಗಳು ದೊರೆತಿದ್ದು, ಸಾವಿನ ಸಂಖ್ಯೆ 17ಕ್ಕೇರಿದೆ. ರಾತ್ರಿಇಡೀ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಇಂದು ಕೂಡ ತಮ್ಮ ಕಾರ್ಯಾಚರಣೆ ಮುಂದುವರೆಸಿದರು. ಕಾರ್ಖಾನೆಯ ಅವಶೇಷಗಳಡಿಯಲ್ಲಿ ಇಂದು ಓರ್ವ ಮಹಿಳೆ ಸೇರಿದಂತೆ ಎರಡು ಮೃತದೇಹಗಳು ಪತ್ತೆಯಾಗಿವೆ.
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಧ್ಯಪ್ರದೇಶ ಸರ್ಕಾರ, ಅವಘಡ ಕುರಿತು ತನಿಖೆಗೆ ಆದೇಶಿಸಲಾಗಿದೆ. ಅಲ್ಲದೆ ಕಾರ್ಖಾನೆಯ ಪರವಾನಗಿಯನ್ನು ಪರಿಶೀಲಿಸಲಾಗುತ್ತಿದೆ. ಅಂತೆಯೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳ ವಿವರವನ್ನು ಕೇಳಲಾಗಿದ್ದು, ಮೃತಪಟ್ಟಿವರಿಗೆ ಪರಿಹಾರ ಧನ ನೀಡಲಾಗುತ್ತದೆ ಎಂದು ಹೇಳಿದೆ. ಮೃತಪಟ್ಟವರಿಗೆ ತಲಾ 1.50 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರು ರುಪಾಯಿಗಳ ಪರಿಹಾರ ಘೋಷಿಸಿದೆ.
ಮೇಲ್ನೋಟಕ್ಕೆ ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗುತ್ತಿದ್ದರೂ, ಸಂಪೂರ್ಣ ತನಿಖೆಯಿಂದ ಸತ್ಯಾಂಶ ಹೊರಹಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಖಾನೆಯ ಮಾಲೀಕ ಮಹಮದ್ ಯೂಸುಫ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

