'ಬಾಂಗ್ಲಾ ನುಸುಳುಕೋರರು ದೇಶ ತೊರೆಯಬೇಕು'

ಕೋಲ್ಕತಾ: ಬಾಂಗ್ಲಾದೇಶದಿಂದ ಭಾರತಕ್ಕೆ ನುಸುಳಿರುವ ಅಕ್ರಮ ನುಸುಳುಕೋರರು ಕೂಡಲೇ ದೇಶವನ್ನು ತೊರೆಯಬೇಕು ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಬಂಕುರ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ನರೇಂದ್ರ ಮೋದಿ ಅವರು, ದೇಶಕ್ಕೆ ಅಕ್ರಮವಾಗಿ ನುಸುಳಿರುವ ಬಾಂಗ್ಲಾದೇಶದ ಪ್ರಜೆಗಳು ಕೂಡಲೇ ದೇಶವನ್ನು ತೊರೆಯಬೇಕು. ಅಕ್ರಮ ನಿವಾಸಿಗಳು ದೇಶಕ್ಕೆ ಸಮಸ್ಯೆಯಾಗಿ ಪರಿಣಮಿಸುತ್ತಿದ್ದು, ನಮ್ಮ ದೇಶದ ಯುವಕರಿಗೆ ಸಿಗಬೇಕಾಗಿದ್ದ ಕೆಲಸಗಳು ಬಾಂಗ್ಲಾದೇಶ ಪ್ರಜೆಗಳ ಪಾಲಾಗುತ್ತಿದೆ. ಆದರೆ ನಮ್ಮ ಪ್ರಾಮುಖ್ಯತೆ ಏನಿದ್ದರೂ ನಮ್ಮ ದೇಶದ ಪ್ರಜೆಗಳಿಗೆ ಮಾತ್ರ ಎಂದು ನರೇಂದ್ರ ಮೋದಿ ಹೇಳಿದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ದ ಕೂಡ ವಾಗ್ದಾಳಿ ನಡೆಸಿದ ನರೇಂದ್ರ ಮೋದಿ ಅವರು, ಮಮತಾ ಬ್ಯಾನರ್ಜಿ ಅವರು ಪೇಪರ್ ಹುಲಿ. ಕೇವಲ ಪತ್ರಿಕೆಗಳಲ್ಲಿ ಮಾತ್ರವೇ ಹುಲಿಯಾಗಿದ್ದು, ಕಾರ್ಯದಲ್ಲಿ ಅಲ್ಲ. ಮಮತಾ ಅವರೇ ನಿಮಗೆ ಧೈರ್ಯವಿದ್ದರೆ ಶಾರದಾ ಹಗರಣದ ಅಪರಾಧಿಗಳನ್ನು ಜೈಲಗಟ್ಟಿ. ಆಗ ನೀವು ನಿಜವಾದ ಹುಲಿ ಎಂದು ಒಪ್ಪಿಕೊಳ್ಳುತ್ತೇನೆ ಎಂದು ಸವಾಲೆಸೆದರು.
ಮಮತಾ ಬ್ಯಾನರ್ಜಿ ಅವರೇ ನಿಮ್ಮ ನಾಟಕವನ್ನು ನಿಲ್ಲಿಸಿ, ಸರ್ಕಾರವನ್ನು ಉತ್ತಮವಾಗಿ ನಡೆಸಿ. ಸಾಧ್ಯವಾದರೆ ಗುಜರಾತ್ ನಂತೆ ಪಶ್ಚಿಮ ಬಂಗಾಳವನ್ನು ಅಭಿವೃದ್ಧಿಪಡಿಸಿ ಎಂದು ಪರೋಕ್ಷವಾಗಿ ಮಮತಾರನ್ನು ಕಿಚಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


