2ಜಿ ಹಗರಣ: ಸಮನ್ಸ್ ನಿರಾಕರಿಸಿದ ಎ.ರಾಜಾ

ನವದೆಹಲಿ: ಬಹುಕೋಟಿ 2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಟೆಲಿಕಾಂ ಸಚಿವ ಎ.ರಾಜಾ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.
ನವದೆಹಲಿಯ ಸಿಬಿಐ ಕಚೇರಿಯಲ್ಲಿ ಇಂದು ನಡೆದ ವಿಚಾರಣೆಯಲ್ಲಿ ಎ.ರಾಜಾ ಸಿಬಿಐ ಸಮನ್ಸ್ ಅನ್ನು ನಿರಾಕರಿಸಿದ್ದು, ಇದಕ್ಕೆ ತಾಂತ್ರಿಕತೆಯ ಉದಾಹರಣೆ ನೀಡಿದ್ದಾರೆ. ಈಗಾಗಲೇ ತನ್ನ ಹೇಳಿಕೆಗಳನ್ನು ಅಧಿಕಾರಿಗಳು ರೆಕಾರ್ಡ್ ಮಾಡಿಕೊಳ್ಳುತ್ತಿದ್ದಾರೆ. ಹೀಗಿರುವಾಗ ನಾನೇಕೆ ಸಮನ್ಸ್ ಪಡೆಯಲಿ ಎಂದು ರಾಜಾ ಸಿಬಿಐ ಅಧಿಕಾರಿಗಳನ್ನೇ ಪ್ರಶ್ನಿಸಿದ್ದಾರೆ.
ಆದರೆ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಜಾರಿ ನಿರ್ದೇಶನಾಲಯ ಅಧಿಕಾರಿ, ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ಚಾರ್ಜ್‌ಶೀಟ್ ಮಾಹಿತಿಯನ್ನು ಸಮನ್ಸ್‌ನೊಡನೆ ನೀಡುವುದು ಕಾನೂನು. ಹೀಗಾಗಿ ಎ.ರಾಜಾಗೆ ಸಮನ್ಸ್ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
2ಜಿ ಹಗರಣ ಸಂಬಂಧ ಇಂದಿನಿಂದ ವಿಶೇಷ ವಿಚಾರಣೆ ಪ್ರಾರಂಭವಾಗಿದ್ದು, ಹಗರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳ ಹೇಳಿಕೆಗಳನ್ನು ರೆಕಾರ್ಡ್ ಮಾಡಿಕೊಳ್ಳಲಾಗುತ್ತಿದೆ. ಹಗರಣ ಸಂಬಂಧ ಸಿಬಿಐ ಅಧಿಕಾರಿಗಳು ಎ.ರಾಜಾ ಅವರಿಗೆ ಈಗಾಗಲೇ ಸುಮಾರು 1,700 ಪ್ರಶ್ನೆಗಳನ್ನು ಕೇಳಿದ್ದು, ರಾಜಾ ನೀಡಿರುವ ಉತ್ತರಗಳನ್ನು 824 ಪುಟಗಳಲ್ಲಿ ದಾಖಲಿಸಿಕೊಂಡಿದ್ದಾರೆ. ಅಂತೆಯೇ ಇದನ್ನು ಈ ಹಿಂದಿನ ವಿಚಾರಣೆಯಲ್ಲಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದರು.
ಈ ಹಿಂದೆ ಹಗರಣ ಸಂಬಂಧ ಹವಾಲಾ ಹಣ ಪ್ರಕರಣದಲ್ಲಿ ಕರುಣಾನಿಧಿ ಪುತ್ರಿ ಕನ್ನಿಮೋಳಿ, ಪತ್ನಿ ದಯಾಳು ಅಮ್ಮನ್ ಮತ್ತು ಎ.ರಾಜ್ ವಿರುದ್ಧ ಸಿಬಿಐ ಚಾರ್ಜ್‌ಶೀಟ್ ದಾಖಲಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


