ಈಗಿನ ಸುದ್ದಿ

ಅಜಂಗಢ ಉಗ್ರರ ನೆಲೆ: ಶಾ ಹೇಳಿಕೆ ವಿರುದ್ಧ ಕ್ರಮಕ್ಕೆ 'ಕೈ' ಆಗ್ರಹ

ಅಜಂಗಢ ಉಗ್ರರ ನೆಲೆ: ಶಾ ಹೇಳಿಕೆ ವಿರುದ್ಧ ಕ್ರಮಕ್ಕೆ 'ಕೈ' ಆಗ್ರಹ
Published On :

ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹಾಗೂ ಅವರ ಆಪ್ತ ಅಮಿತ್ ಶಾ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ವಿವಾದಾತ್ಮಕ ಹೇಳಿಕೆ ನೀಡಿರುವ ಶಾ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ.

ಅಜಂಗಢ ಉಗ್ರರ ನೆಲೆಯಾಗಿದೆ ಎಂದು ಅಮಿತ್ ಶಾ ಹೇಳಿದ್ದರು. ಇದಕ್ಕೆ ತೀಕ್ಷಣವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮೋದಿ ಮತ್ತು ಅಮಿತ್ ಶಾ ಅವರು ಅಭಿವೃದ್ಧಿಯಿಂದ ಕೋಮುವಾದಿ ರಾಜಕಾರಣಕ್ಕೆ ಮರಳಿದ್ದಾರೆ. ಮೋದಸಾ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಭಾಗಿಯಾಗಿದ್ದಾರೆ ಎಂಬುದನ್ನು ಅವರು ಮರೆತಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಟ್ವಿಟ್ ಮಾಡಿದ್ದಾರೆ.

ಮೋದಸಾ ಗುಜರಾತ್‌ನಲ್ಲಿದೆ. ಅಜಂಗಢ ಹಿಂದೂ-ಮುಸ್ಲಿಂ ಏಕತೆಯ ಸಂಕೇತ. 1947 ರ ದೇಶವಿಭಜನೆಯ ಬಳಿಕ ಹಾಗೂ 1992ರ ಬಾಬ್ರಿ ಮಸೀದಿ ಧ್ವಂಸದ ಬಳಿಕವೂ ಅಲ್ಲಿ ಹಿಂಸಾಚಾರ ನಡೆದಿಲ್ಲ. ಅಜಂಗಢದ ಬಗ್ಗೆ ಅಮಿತ್‌ ಶಾ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಅವರ ವಿರುದ್ಧ ಚುನಾವಣೆ ಆಯೋಗ ಕ್ರಮ ಕೈಗೊಳ್ಳಬೇಕು'' ಎಂದು ಸಿಂಗ್‌ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.