ಇಂದಿನಿಂದಲೇ ರಾಜ್ಯಾದ್ಯಂತ 'ಲೋಡ್ ಶೆಡ್ಡಿಂಗ್'

ಬೆಂಗಳೂರು: ರಾಜ್ಯಾದ್ಯಂತ ಸೋಮವಾರದಿಂದ ಲೋಡ್ ಶೆಡ್ಡಿಂಗ್ ಮಾಡಲಾಗುತ್ತದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿದ್ಯುತ್ ಉತ್ಪಾದನೆಯಲ್ಲಿ ಗಣನೀಯ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ಇಂದಿನಿಂದಲೇ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಹೇರಲಾಗುವುದು ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಹಿಂದೆ 8522 ಮೆಗಾವ್ಯಾಟ್ ಉತ್ಪಾದನೆಯಾಗುತ್ತಿತ್ತು. ಆದರೀಗ ಕೇವಲ 7527 ಮೆಗಾವ್ಯಾಟ್ ವಿದ್ಯುತ್ ಮಾತ್ರ ಉತ್ಪಾದನೆಯಾಗುತ್ತಿದೆ. ಅಲ್ಲದೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೂ ಸುಮಾರು 650 ಮೆಗಾವಾಟ್ ವಿದ್ಯುತ್ ರವಾನೆ ಮಾಡಬೇಕಿದೆ. ಹೀಗಾಗಿ ನಮಗೆ ಒಟ್ಟಾರೆ 1 ಸಾವಿರದ 165 ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಆದ್ದರಿಂದ ಲೋಡ್ ಶೆಡ್ಡಿಂಗ್ ಅನಿವಾರ್ಯ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಅಂತೆಯೇ ಬೆಸ್ಕಾಂ, ಹೆಸ್ಕಾಂ ನಂತಹ ಸ್ಥಳೀಯ ಸಂಸ್ಥೆಗಳೇ ಲೋಡ್ ಶೆಡ್ಡಿಂಗ್ ಪ್ರಮಾಣವನ್ನು ನಿರ್ಧರಿಸಲಿವೆ. ಅತಿ ಹೆಚ್ಚು ವಿದ್ಯುತ್ ಬೇಡಿಕೆ ಇರುವ ಬೆಂಗಳೂರು ಉತ್ತರದಲ್ಲಿ ಪ್ರತಿನಿತ್ಯ ಕನಿಷ್ಟ 1.5 ರಿಂದ 2 ಗಂಟೆಗಳವರೆಗೆ ಮತ್ತು ಇತರೆಡೆ ಕನಿಷ್ಟ 2 ಗಂಟೆಗಳ ಕಾಲ ವಿದ್ಯುತ್ ಸ್ಥಗಿತಗೊಳಿಸಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಲೋಡ್ ಶೆಡ್ಡಿಂಗ್ ಪ್ರಮಾಣವನ್ನು ನಿರ್ಧರಿಸುವ ಜವಾಬ್ದಾರಿ ಆಯಾ ಸ್ಥಳೀಯ ವಿತರಣಾ ಕಂಪನೆಗಳಿಗೆ ನೀಡಲಾಗಿದೆ.
ಈ ಹಿಂದೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಹೇರುವುದಿಲ್ಲ ಎಂದು ಹೇಳಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಇದೀಗ ಲೋಕಸಭಾ ಚುನಾವಣೆ ಮುಕ್ತಾಯವಾಗುತ್ತಿದ್ದಂತೆಯೇ ರಾಜ್ಯದ ಜನತೆಯ ಮೇಲೆ ಲೋಡ್ ಶೆಡ್ಡಿಂಗ್ ಹೇರಿದೆ. ಈ ಹಿಂದೆ ಹಲವು ಬಾರಿ ವಿದ್ಯುತ್ ಕಂಪನಿಗಳು ವಿದ್ಯುತ್ ಕೊರೆತೆ ಇದ್ದು, ಲೋಡ್ ಶೆಡ್ಡಿಂಗ್ ಹೇರುವಂತೆ ಸಲಹೆ ನೀಡಿದ್ದವು. ಆದರೆ ಸರ್ಕಾರ ಮಾತ್ರ ಮತದಾನ ಮುಗಿಯುವವರೆಗೂ ಕಾದು, ಇದೀಗ ಲೋಡ್ ಶೆಡ್ಡಿಂಗ್ ಹೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


