ಈಗಿನ ಸುದ್ದಿ

ಪ್ರಚೋದನಕಾರಿ ಭಾಷಣ: ಗಿರಿರಾಜ್ ಸಿಂಗ್‌ಗೆ ಜಾಮೀನು

ಪ್ರಚೋದನಕಾರಿ ಭಾಷಣ: ಗಿರಿರಾಜ್ ಸಿಂಗ್‌ಗೆ ಜಾಮೀನು
Published On :

ಪಾಟ್ನಾ: ಪ್ರಚೋದನಕಾರಿ ಭಾಷಣ ಮಾಡಿ ಬಂಧನ ಭೀತಿ ಎದುರಿಸುತ್ತಿದ್ದ ಬಿಹಾರ ಬಿಜೆಪಿ ಮುಖಂಡ ಗಿರಿರಾಜ್ ಸಿಂಗ್ ಅವರಿಗೆ ಕೊನೆಗೂ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.

ಚುನಾವಣಾ ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಿರಿರಾಜ್ ಸಿಂಗ್ ಅವರು ಇಂದು ನ್ಯಾಯಾಲಯಕ್ಕೆ ಶರಣಾಗಿದ್ದು, ನ್ಯಾಯಾಲಯ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಏಪ್ರಿಲ್ 19ರಂದು ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ನಡೆದ ಪ್ರಚಾರದ ವೇಳೆ ಭಾಷಣ ಮಾಡಿದ್ದ ಗಿರಿರಾಜ್ ಸಿಂಗ್ ಅವರು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ದ್ವೇಷಿಸುವವರು ಪಾಕಿಸ್ತಾನಕ್ಕೆ ಹೋಗಬಹುದು ಎಂದು ಹೇಳಿದ್ದರು.

ಗಿರಿರಾಜ್ ಸಿಂಗ್ ಅವರ ಈ ವಿವಾದಾತ್ಮಕ ಹೇಳಿಕೆ ಕುರಿತು ದೇಶಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿತ್ತು. ಅಲ್ಲದೆ ಸ್ವತಃ ನರೇಂದ್ರ ಮೋದಿ ಅವರು ಗಿರಿರಾಜ್ ಸಿಂಗ್ ಹೇಳಿಕೆಯನ್ನು ಖಂಡಿಸಿದ್ದರು. ತಮ್ಮ ಪ್ರಚೋದಾನಾತ್ಮಕ ಹೇಳಿಕೆಯಿಂದ ಗಿರಿರಾಜ್ ಸಿಂಗ್ ಕೇಂದ್ರ ಚುನಾವಣಾ ಆಯೋಗದ ಕೆಂಗಣ್ಣಿಗೂ ಗುರಿಯಾಗಿದ್ದರು. ಏಪ್ರಿಲ್ 21ರಂದು ದಿಯೋಘರ್ ಜಿಲ್ಲೆಯ ವಿಮಾನ ನಿಲ್ದಾಣ ಪೊಲೀಸರು ಗಿರಿರಾಜ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ಇತ್ತ ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ಗಿರಿರಾಜ್ ಸಿಂಗ್ ಅವರು ನಾಪತ್ತೆಯಾಗಿದ್ದರು, ಕೆಲ ಕಾಲ ಅಜ್ಞಾತ ಸ್ಥಳದಿಂದಲೇ ಪ್ರಚಾರ ಮಾಡುತ್ತಿದ್ದ ಗಿರಿರಾಜ್ ಸಿಂಗ್, ಜಾಮೀನು ರಹಿತ ಬಂಧನ ವಾರೆಂಟ್ ತಿರಸ್ಕರಿಸುತ್ತಿದ್ದಂತೆಯೇ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇಂದು ನ್ಯಾಯಾಲಯಕ್ಕೆ ಶರಣಾದ ಅವರಿಗೆ ಷರತ್ತು ಬದ್ಧ ಜಾಮೀನು ನೀಡಲಾಗಿದೆ. ಜಿಲ್ಲಾ ಮುಖ್ಯ ನ್ಯಾಯಮೂರ್ತಿ ಜಾವೆದ್ ಅಲಂ ಅವರು ಗಿರಿರಾಜ್ ಸಿಂಗ್ ಅವರಿಗೆ ಜಾಮೀನು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.