ಟೋಲ್ ದರ ಏರಿಕೆ: ತೀವ್ರಗೊಂಡ ಪ್ರತಿಭಟನೆ

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ-7ರ ಟೋಲ್ ದರ ದಿಢೀರ್ ಏರಿಕೆಯನ್ನು ಖಂಡಿಸಿ ಪ್ರತಿಭಟನಾಕಾರರು ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಬಳಿ ಟೋಲ್ ಗೇಟ್ ದರವನ್ನು ನವಯುಗ ಸಂಸ್ಥೆ ನಾಲ್ಕು ಪಟ್ಟು ದಿಢೀರ್ ಏರಿಕೆ ಮಾಡಿ ಹಣ ಸಂಗ್ರಹಿಸುತ್ತಿದ್ದು, ಇದರ ವಿರುದ್ಧ ವಿವಿಧ ಸಂಘಟನೆಗಳು ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಇಂದು ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಟೋಲ್ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ದೇವೇಗೌಡ ಅವರು, ಟೋಲ್ ಗೇಟ್ ದರ ಹೆಚ್ಚಳದಿಂದ ಬಡವರಿಗೆ ತೊಂದರೆಯಾಗುತ್ತದೆ. ದಿನನಿತ್ಯ ಈ ಇದೇ ರಸ್ತೆಯಲ್ಲಿ ಪ್ರಯಾಣಿಸುವ ಟ್ಯಾಕ್ಸಿ ಚಾಲಕರಿಗೆ ಹೊರೆಯಾಗಲಿದೆ ಎಂದರು. ಸರ್ಕಾರ ಶೀಘ್ರವೇ ಮಧ್ಯಸ್ಥಿಕೆ ವಹಿಸಿ ಟೋಲ್ ದರವನ್ನು ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು. ಅಲ್ಲದೆ ಟೋಲ್ ದರ ಇಳಿಕೆ ಮಾಡುವವರೆಗೂ ಜೆಡಿಎಸ್ ಶಾಂತಿಯುತ ಪ್ರತಿಭಟನೆ ನಡೆಸುತ್ತದೆ ಎಂದರು.
ಟೋಲ್ ದರ ಖಂಡಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಪ್ರತಿಭಟನೆಯಲ್ಲಿ ಲಾರಿ ಮಾಲೀಕರು, ಟೂರಿಸ್ಟ್ ವಾಹನಗಳು, ತರಕಾರಿ ಸಾಗಣೆ ವಾಹನಗಳು, ಏರ್ಪೋರ್ಟ್ ಟ್ಯಾಕ್ಸಿ, ಸರಕು ಸಾಗಣೆ ಲಾರಿ, ಖಾಸಗಿ ಬಸ್ ಮಾಲೀಕರ ಸಂಘಟನೆಗಳು ಸೇರಿದಂತೆ ಎಲ್ಲಾ ಸಾರಿಗೆ ಸಂಘಟನೆಗಳು ಟೋಲ್ ಪ್ಲಾಜಾ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಸಾದಹಳ್ಳಿ ಗೇಟ್ ಬಳಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.
ಸರ್ವಿಸ್ ರಸ್ತೆ ಅಗತ್ಯ: ಈ ಟೋಲ್ ರಸ್ತೆ ಮೂಲಕ ಅನೇಕ ಮಂದಿ ರೈತರು ಚಿಕ್ಕ ವಾಹನಗಳಲ್ಲಿ ತರಕಾರಿ, ಹಣ್ಣು ಹಂಪಲು ಸಾಗಿಸುತ್ತಾರೆ. ಎಲ್ಲಕ್ಕಿಂತ ಮುಖ್ಯವಾಗಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕರೆದುದೊಯ್ಯಲೂ ಇದೇ ರಸ್ತೆಯನ್ನು ಅವಲಂಬಿಸಬೇಕು. ಇದರಿಂದ ಅವರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಹಿಂದಿದ್ದಷ್ಟೇ ಶುಲ್ಕ ವಸೂಲು ಮಾಡಬೇಕು. ಜತೆಗೆ ಸರ್ವಿಸ್ ರಸ್ತೆ ನಿರ್ಮಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


