ಬಿಜೆಪಿ ಪ್ರತಿಭಟನೆಗೆ ಆಯೋಗ ಬೇಸರ

ನವದೆಹಲಿ: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ರ್ಯಾಲಿಗೆ ಆಯೋಗ ಅನುಮತಿ ನಿರಾಕರಣೆ ವಿರುದ್ಧ ಬಿಜೆಪಿ ನಡೆಸಿದ ಪ್ರತಿಭಟನೆಗೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಬೇಸರ ವ್ಯಕ್ತಪಡಿಸಿದೆ.
ಈ ಸಂಬಂಧ ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯೋಗದ ಆಯುಕ್ತ ವಿ.ಎಸ್. ಸಂಪತ್ ಅವರು, ಆಯೋಗದ ವಿರುದ್ಧ ಬಿಜೆಪಿ ಪ್ರತಿಭಟನೆಯಿಂದ ನಮಗೆ ಬೇಸರ ತಂದಿದೆ. ವಾರಣಾಸಿಯಲ್ಲಿ ಮೋದಿ ಅವರ ರ್ಯಾಲಿಗೆ ನಿರ್ಬಂಧ ಹೇರಿರುವುದರ ಹಿಂದೆ ಭದ್ರತೆಯ ಕಳವಳದ ಕಾರಣವಿದೆ ಎಂದು ಸ್ಪಷ್ಟಪಡಿಸಿದರು.
ಚುನಾವಣಾ ಆಯೋಗ ತನ್ನದೇ ಆದ ಕಾನೂನು ಕಟ್ಟಳೆಗಳನ್ನು ಹೊಂದಿದ್ದು, ದೇಶದಲ್ಲಿ ನ್ಯಾಯಸಮ್ಮತವಾದ ಚುನಾವಣೆ ನಡೆಸಲು ಆಯೋಗ ಶ್ರಮಿಸುತ್ತಿದೆ. ಅಲ್ಲದೆ ನಾವು ಯಾವುದೇ ರಾಜಕೀಯ ಪಕ್ಷದ ಪರವಾಗಿಲ್ಲ ಎಂದರು. ಬಿಜೆಪಿ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುವುದರ ಮೂಲಕ ಆಯೋಗದ ನಿರ್ಧಾರವನ್ನೇ ಪ್ರಶ್ನಿಸುತ್ತಿದೆ. ಆದರೆ ಚುನಾವಣಾ ಆಯೋಗ ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಂಪತ್ ಹೇಳಿದರು.
ಮೇ 12 ರಂದು ವಾರಣಾಸಿ ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರ ಕೆಲವೊಂದು ಚುನಾವಣಾ ರ್ಯಾಲಿಗಳಿಗೆ ನಿನ್ನೆ ಆಯೋಗ ಅನುಮತಿ ನಿರಾಕರಿಸಿತ್ತು. ಇದರಿಂದ ಸಿಟ್ಟಿಗೆದ್ದ ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಇಂದು ಅಪಾರ ಬಿಜೆಪಿ ಕಾರ್ಯಕರ್ತರೊಂದಿಗೆ ವಾರಣಾಸಿಯ ಪ್ರಸಿದ್ದ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಮುಂದೆ ಪ್ರತಿಭಟನೆ ನಡೆಸಿ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


