ಈಗಿನ ಸುದ್ದಿ

ಆಂಧ್ರ ಮಾಜಿ ಸಿಎಂ ಜನಾರ್ಧನ ರೆಡ್ಡಿ ನಿಧನ

ಆಂಧ್ರ ಮಾಜಿ ಸಿಎಂ ಜನಾರ್ಧನ ರೆಡ್ಡಿ ನಿಧನ
Published On :

ಹೈದ್ರಾಬಾದ್: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜನಾರ್ಧನ ರೆಡ್ಡಿ ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ 80 ವರ್ಷದ ಜನಾರ್ಧನ ರೆಡ್ಡಿ ಅವರು ಇಂದು ಬೆಳಿಗ್ಗೆ ಹೈದ್ರಾಬಾದ್‌ನ ನಿಜಮ್ ಇನ್ಸ್‌ಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ನಿಮ್ಸ್) ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ನೆಲ್ಲೂರಿನ ವಕಡು ಗ್ರಾಮದಲ್ಲಿ ಜನಿಸಿದ ರೆಡ್ಡಿ, 1990 ರಿಂದ 1992ರ ಅವಧಿಯಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾಗಿದ್ದರು. ಮೂರು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಇವರು, ಆಂಧ್ರ ಪ್ರದೇಶದ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.