ಈಗಿನ ಸುದ್ದಿ

ಗಿರಿರಾಜ್ ಸಿಂಗ್‌ಗೆ ಷರತ್ತುಬದ್ಧ ಜಾಮೀನು

ಗಿರಿರಾಜ್ ಸಿಂಗ್‌ಗೆ ಷರತ್ತುಬದ್ಧ ಜಾಮೀನು
Published On :

ಜಾರ್ಖಂಡ್(ಬಿಹಾರ): ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ವಿರೋಧಿಸುವವರು ಪಾಕಿಸ್ತಾನಕ್ಕೆ ಹೋಗಲಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಹಾರದ ಬಿಜೆಪಿ ಮುಖಂಡ ಗಿರಿರಾಜ್ ಸಿಂಗ್‌ಗೆ ಜಾರ್ಖಂಡ್ ಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ನೀಡಿದೆ.

ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪ ಹಿನ್ನೆಲೆಯಲ್ಲಿ ಗಿರಿರಾಜ್ ಸಿಂಗ್ ವಿರುದ್ಧ ಬೋಕೋರೊ ಮತ್ತು ದೇವಗಡ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಪ್ರಕರಣ ವಿಚಾರಣೆ ನಡೆಸಿದ ಕೋರ್ಟ್ ಗಿರಿರಾಜ್ ಸಿಂಗ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಏಪ್ರಿಲ್ 18ರಂದು ಜಿಲ್ಲೆಯಲ್ಲಿ ನಡೆದಿದ್ದ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಗಿರಿರಾಜ್ ಸಿಂಗ್ ಅವರು, ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದ್ವೇಷಿಸುವವರು ಮತ್ತು ಟೀಕಿಸುವವರು ಭಾರತದಲ್ಲಿ ಇರಲು ಲಾಯಕ್ಕಲ್ಲ. ಅವರು ಪಾಕಿಸ್ತಾನಕ್ಕೆ ಹೋಗಬಹುದು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿರಾಜ್ ಸಿಂಗ್ ವಿರುದ್ಧ ಜಾರ್ಖಂಡ್‌ನ ಬೋಕಾರೋ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಐಪಿಸಿ ಸೆಕ್ಷನ್ 153 ಎ(2 ವರ್ಗಗಳನ್ನು ಪರಸ್ಪರ ಎತ್ತಿಕಟ್ಟುವದು), 295 ಎ(ಧಾರ್ಮಿಕ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟು ಮಾಡುವಂತಹ ವರ್ತನೆ) ಮತ್ತು 298(ಕೀಳು ಮಟ್ಟದ ಪದ ಬಳಕೆಯಿಂದ ಒಂದು ಕೋಮನ್ನು ಹೀಗಳೆಯುವುದು)ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.