ಮೋದಿಗೆ ಬಿಎಸ್ಪಿ ಬೆಂಬಲ ನೀಡುವುದಿಲ್ಲ: ಮಾಯಾವತಿ

ಲಖನೌ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗೆ ಬಹುಜನ ಸಮಾಜವಾದಿ ಪಕ್ಷ ಎಂದಿಗೂ ಬೆಂಬಲ ನೀಡುವುದಿಲ್ಲ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಶುಕ್ರವಾರ ಹೇಳಿದ್ದಾರೆ.
ವಾರಣಾಸಿಯಲ್ಲಿ ಬಹುಜನ ಸಮಾಜವಾದಿ ಪಕ್ಷದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಮಾಯಾವತಿ, ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎಗೆ ಪೂರ್ಣ ಬಹುಮತ ಸಿಗದೆ ಇದ್ದು, ಮೋದಿ ನಮ್ಮನ್ನು ಬೆಂಬಲಿಸುವಂತೆ ಕೇಳಿದರು ನಾವು ಎಂದಿಗೂ ಮೋದಿಗೆ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಚುನಾವಣೆಯಲ್ಲಿ ಗೆಲ್ಲಲು ಮೋದಿ ತಂತ್ರಗಳನ್ನು ಅನುಸರಿಸುತ್ತಿದ್ದು, ನರೇಂದ್ರ ಮೋದಿ ಮತದಾರರನ್ನು ದಾರಿ ತಪ್ಪಿಸುತ್ತಿದ್ದಾರೆ ಆದರೆ ಜನತೆ ಇದಕ್ಕೆ ಮರಳಾಗುವುದಿಲ್ಲ ಎಂದರು.
ಇತ್ತೀಚೆಗಷ್ಟೇ ನರೇಂದ್ರ ಮೋದಿ ಅವರು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಎನ್ಡಿಎಗೆ ಸಂಪೂರ್ಣ ಬಹುಮತ ಸಿಗದೆ ಇದ್ದರೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಮಮತಾ ಬ್ಯಾನರ್ಜಿ ಹಾಗೂ ಮಾಯಾವತಿ ಅವರನ್ನು ಬೆಂಬಲ ಕೋರುತ್ತೇನೆ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಯಾವತಿ ಇತರ ಪಕ್ಷಗಳ ಬಗ್ಗೆ ನನಗೆ ಗೊತ್ತಿಲ್ಲ ಆದರೆ ಬಿಎಸ್ಪಿ ಮಾತ್ರ ಎಂದಿಗೂ ಮೋದಿಗೆ ಬೆಂಬಲ ನೀಡುವುದಿಲ್ಲ ಎಂದು ಖಡಕ್ ಉತ್ತರ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


