ಯಾವುದೇ ಪಕ್ಷದ ಬೆಂಬಲ ಪಡೆಯಲು ಬಿಜೆಪಿ ಸಿದ್ಧ: ಅಮಿತ್ ಶಾ

ವಾರಣಾಸಿ: ಕೇಂದ್ರದಲ್ಲಿ ಸರ್ಕಾರ ರಚಿಸುವ ನಿಟ್ಟಿನಲ್ಲಿ ದೇಶದ ಭಾರತೀಯ ಜನತಾ ಪಕ್ಷ, ಯಾವುದೇ ಪಕ್ಷದ ಬೆಂಬಲ ಪಡೆಯುವ ವಿಚಾರದಲ್ಲಿ ನಾವು ಯಾವುದೇ ರೀತಿಯ ರಾಜಕೀಯ ಅಸ್ಪೃಶ್ಯತೆ ಮಾಡುವುದಿಲ್ಲ ಎಂದು ಬಿಜೆಪಿ ಮುಖಂಡ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ಫಲಿತಾಂಶ ಪ್ರಕಟಗೊಳ್ಳಲು ಇನ್ನು ಕೇವಲ ಒಂದು ವಾರವಿರುವಾಗಲೇ ದೇಶದ ಅಭಿವೃದ್ಧಿಯನ್ನು ಬಯಸುವ ಯಾವುದೇ ರಾಜಕೀಯ ಪಕ್ಷದಿಂದ ಬೆಂಬಲ ಪಡೆಯುವ ವಿಚಾರದಲ್ಲಿ ಹಿಂದೆ ಬೀಳುವುದಿಲ್ಲ ಎಂದು ಶಾ ಹೇಳಿದ್ದಾರೆ.
ವಾರಣಾಸಿಯಲ್ಲಿಂದು ಮಾತನಾಡಿದ ಅಮಿತ್ ಶಾ, ಈ ಬಾರಿಯ ಚುನಾವಣೆಯಲ್ಲಿ ಎನ್ಡಿಎ ಪಕ್ಷ ಸುಮಾರು 300ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಅದೇ ರೀತಿ ಅಗತ್ಯಾನುಸಾರವಾಗಿ ಯಾವುದೇ ಪಕ್ಷದಿಂದ ಬೆಂಬಲ ಪಡೆಯಲು ಸಂಕೋಚ ತೋರುವುದಿಲ್ಲ. ದೇಶದ ಅಭಿವೃದ್ಧಿ ಸಾಧನೆಯಲ್ಲಿ ಪಾಲ್ಗೊಳ್ಳಲು ಯಾವುದೇ ರಾಜಕೀಯ ಪಕ್ಷ ಆಸಕ್ತಿ ತೋರಿದಲ್ಲಿ ಅದನ್ನು ಜತೆಗೂಡಿಸಿಕೊಳ್ಳಲು ಬಿಜೆಪಿ ಸಿದ್ಧವಿದೆ ಎಂದರು.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗೆ ಬಹುಜನ ಸಮಾಜವಾದಿ ಪಕ್ಷ ಎಂದಿಗೂ ಬೆಂಬಲ ನೀಡುವುದಿಲ್ಲ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


