ಈಗಿನ ಸುದ್ದಿ

ಅಮಿತ್ ಶಾಗೆ ಸಮನ್ಸ್ ಜಾರಿ

ಅಮಿತ್ ಶಾಗೆ ಸಮನ್ಸ್ ಜಾರಿ
Published On :

ಮುಂಬೈ: ತುಳಸಿರಾಮ್ ಪ್ರಜಾಪತಿ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಅಮಿತ್ ಶಾಗೆ ವಿಶೇಷ ಸಿಬಿಐ ಕೋರ್ಟ್ ಶನಿವಾರ ಸಮನ್ಸ್ ಜಾರಿ ಮಾಡಿದೆ.

ಗುಜರಾತ್‌ನಿಂದ ಮುಂಬೈ ಕೋರ್ಟ್‌ಗೆ ವರ್ಗಾವಣೆಗೊಂಡಿರುವ ತುಳಸಿರಾಮ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನರೇಂದ್ರ ಮೋದಿ ಆಪ್ತ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾಗೆ ಸಮನ್ಸ್ ಜಾರಿ ಮಾಡಿದ್ದು, ಮೇ 23ರರೊಳಗಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ವಿಶೇಷ ನ್ಯಾಯಾಧೀಶರಾದ ಜೆ.ಟಿ ಉತಪತ್ ಅವರು ಸಮನ್ಸ್ ಜಾರಿ ಮಾಡಿದ್ದಾರೆ. ತುಳಸಿರಾಮ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ, ಅಮಿತ್ ಶಾ, ಪೊಲೀಸ್ ಅಧಿಕಾರಿಗಳು ಸೇರಿದಂತೆ 18 ಜನರ ವಿರುದ್ಧ ಜಾರ್ಜ್‌ಶೀಟ್ ಸಲ್ಲಿಸಿತ್ತು.

ವಿಚಾರಣೆ ಕೈಗೆತ್ತಿಕೊಂಡ ಮುಂಬೈನ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

2005ರ ನವೆಂಬರ್‌ನಲ್ಲಿ ನಡೆದ ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿದ್ದ ತುಳಸಿ ರಾಮ್ ಪ್ರಜಾಪತಿ ಕೂಡ ನಕಲಿ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಶಂಕಿಸಿದ್ದು, ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.